ADVERTISEMENT

38 ವರ್ಷಗಳ ಬಳಿಕ ಆರೋಪಿ ಬಂಧನ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2023, 6:48 IST
Last Updated 26 ಆಗಸ್ಟ್ 2023, 6:48 IST

ಕೆಜಿಎಫ್‌: ಕಳ್ಳತನ ಪ್ರಕರಣದಲ್ಲಿ 38 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಆಂಡರಸನ್‌ ಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ‍ಪಾಷಾಜಾನ್ ಎಂಬಾತನನ್ನು ಶುಕ್ರವಾರ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಆರೋಪಿಯು 1985ರಲ್ಲಿ ಆಂಡರಸನ್‌ಪೇಟೆಯಲ್ಲಿ ವಾಹನ ಕಳವು ಪ್ರಕರಣದಲ್ಲಿ ಬಂಧಿತನಾಗಿದ್ದನು. ನ್ಯಾಯಾಲಯದಿಂದ ಜಾಮೀನು ಪಡೆದ ಆರೋಪಿ ಪುನಃ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ, ತಲೆತಪ್ಪಿಸಿಕೊಂಡಿದ್ದನು. ಆಂಡರಸನ್‌ಪೇಟೆ ಸಬ್‌ ಇನ್‌ಸ್ಪೆಕ್ಟರ್ ಮಂಜುನಾಥ್‌, ಸಿಬ್ಬಂದಿಗಳಾದ ರಾಜೇಂದ್ರ, ರಾಜೇಶ್, ಮುಜಾಮಿಲ್‌ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದರು.

ಕಳ್ಳತನ: ಚಂಬರಸನಹಳ್ಳಿ ಮತ್ತು ದೊಡ್ಡಕಲ್ಲಹಳ್ಳಿ ಗ್ರಾಮಗಳಲ್ಲಿ ಈಚೆಗೆ ನಡೆದಿದ್ದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಗಣೇಶ್ ಎಂಬಾತನನ್ನು ಆಂಡರಸನ್‌ ಪೇಟೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಆರೋಪಿಯಿಂದ ಸುಮಾರು $1.30 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದ ತನಿಖೆ ಮುಂದುವರೆದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.