ADVERTISEMENT

ದಾನಹಳ್ಳಿ: ಕ್ಷೀರಸೌಧ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2020, 14:39 IST
Last Updated 28 ನವೆಂಬರ್ 2020, 14:39 IST
ಕೋಲಾರ ತಾಲ್ಲೂಕಿನ ದಾನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸೌಧವನ್ನು ಕೋಚಿಮುಲ್‌ ನಿರ್ದೇಶಕ ಡಿ.ವಿ.ಹರೀಶ್ ಶನಿವಾರ ಉದ್ಘಾಟಿಸಿದರು.
ಕೋಲಾರ ತಾಲ್ಲೂಕಿನ ದಾನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸೌಧವನ್ನು ಕೋಚಿಮುಲ್‌ ನಿರ್ದೇಶಕ ಡಿ.ವಿ.ಹರೀಶ್ ಶನಿವಾರ ಉದ್ಘಾಟಿಸಿದರು.   

ಕೋಲಾರ: ತಾಲ್ಲೂಕಿನ ನರಸಾಪುರ ಹೋಬಳಿ ವ್ಯಾಪ್ತಿಯ ದಾನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಕ್ಷೀರಸೌಧವನ್ನು ಕೋಚಿಮುಲ್‌ ನಿರ್ದೇಶಕ ಡಿ.ವಿ.ಹರೀಶ್ ಶನಿವಾರ ಉದ್ಘಾಟಿಸಿದರು.

‘ಗ್ರಾಮದ ಸಂಘಕ್ಕೆ ಸ್ವಂತ ಕಟ್ಟಡ ನಿರ್ಮಿಸಲು ಹಾಲು ಒಕ್ಕೂಟದಿಂದ ₹ 2 ಲಕ್ಷ ನೀಡಿಲಾಗಿದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಸಹಾಯಧನ ನೀಡುವಂತೆ ಶಿಫಾರಸು ಮಾಡುತ್ತೇನೆ’ ಎಂದು ಹರೀಶ್‌ ಹೇಳಿದರು.

‘ಹಾಲು ಉತ್ಪಾದಕರು ಒಕ್ಕೂಟದ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ಹಾಲು ಉತ್ಪಾದಕರು ಮತ್ತು ಸಂಘದ ಹಿತದೃಷ್ಟಿಯಿಂದ ಹಾಲಿನ ಗುಣಮಟ್ಟಕ್ಕೆ ಹೆಚ್ಚು ಒತ್ತು ಕೊಡಬೇಕು. ಸಂಘಕ್ಕೆ ಸದ್ಯದಲ್ಲೇ ಕಂಪ್ಯೂಟರ್ ಕೊಡುತ್ತೇವೆ’ ಎಂದು ಭರವಸೆ ನೀಡಿದರು.

ADVERTISEMENT

‘ಗ್ರಾಮಗಳಲ್ಲಿ ಕೂಲಿ ಕೆಲಸ ಮಾಡಿ ಬದುಕು ಸಾಗಿಸುವುದು ಕಷ್ಟ. ಆದ ಕಾರಣ ರಾಸುಗಳನ್ನು ಸಾಕಿ ಸ್ವಾವಲಂಬಿ ಜೀವನ ನಡೆಸಬೇಕು. ರಾಸುಗಳಿಗೆ ಕಡ್ಡಾಯವಾಗಿ ವಿಮೆ ಮಾಡಿಸಬೇಕು’ ಎಂದು ಸಲಹೆ ನೀಡಿದರು.

ಕೋಚಿಮುಲ್‌ ಶಿಬಿರ ಕಚೇರಿ ತಾಲ್ಲೂಕು ಉಪ ವ್ಯವಸ್ಥಾಪಕ ಎ.ಸಿ.ಶ್ರೀನಿವಾಸಗೌಡ, ಕರ್ನಾಟಕ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ವ್ಯವಸ್ಥಾಪಕ ರಾಘವೇಂದ್ರರೆಡ್ಡಿ, ದಾನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ರಾಜೇಂದ್ರ, ಉಪಾಧ್ಯಕ್ಷ ಚೌಡಪ್ಪ, ವಿಸ್ತರಣಾಧಿಕಾರಿ ಶ್ರೀನಿವಾಸ್, ಕಾರ್ಯದರ್ಶಿ ಪ್ರಭುಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.