ADVERTISEMENT

ಕೋಲಾರ: ಡಿಡಿಪಿಐ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2020, 17:04 IST
Last Updated 13 ನವೆಂಬರ್ 2020, 17:04 IST
ನೂತನ ಡಿಡಿಪಿಐ ಕೃಷ್ಣಮೂರ್ತಿ ಕೋಲಾರದಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ನೂತನ ಡಿಡಿಪಿಐ ಕೃಷ್ಣಮೂರ್ತಿ ಕೋಲಾರದಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.   

ಕೋಲಾರ: ಸಾರ್ವಜನಿಕ ಶಿಕ್ಷಣ ಇಲಾಖೆ ನೂತನ ಉಪ ನಿರ್ದೇಶಕರಾಗಿ (ಡಿಡಿಪಿಐ) ಕೃಷ್ಣಮೂರ್ತಿ ಅವರು ಇಲ್ಲಿ ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಪ್ರಭಾರ ಡಿಡಿಪಿಐ ಆಗಿದ್ದ ಕೆ.ಎಂ.ಜಯರಾಮರೆಡ್ಡಿ ಅವರು ಸಾರ್ವಜನಿಕ ಶಿಕ್ಷಣ ಇಲಾಖೆ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿಡಿಪಿಐ ಆಗಿದ್ದ ಕೃಷ್ಣಮೂರ್ತಿ ಅವರನ್ನು ಸರ್ಕಾರ ಇತ್ತೀಚೆಗೆ ಜಿಲ್ಲೆಗೆ ವರ್ಗಾವಣೆ ಮಾಡಿತ್ತು.

ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಶಿಕ್ಷಕ ಸಂಘಟನೆಗಳ ಮುಖಂಡರು ನೂತನ ಡಿಡಿಪಿಐಗೆ ಶುಭ ಕೋರಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.