ADVERTISEMENT

ಕೋಲಾರ: ಮುಂದುವರಿದ ಕೊರೊನಾ ಸೋಂಕಿತರ ಸಾವು

​ಪ್ರಜಾವಾಣಿ ವಾರ್ತೆ
Published 2 ಮೇ 2021, 16:21 IST
Last Updated 2 ಮೇ 2021, 16:21 IST

ಕೋಲಾರ: ಜಿಲ್ಲೆಯಲ್ಲಿ ಕೋವಿಡ್‌ ಮರಣ ಮೃದಂಗ ಮುಂದುವರಿದಿದ್ದು, ಭಾನುವಾರ 6 ಮಂದಿ ಕೊರೊನಾ ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 232ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತರ ಪೈಕಿ ಕೋಲಾರ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಇಬ್ಬರು, ಮಾಲೂರು ಹಾಗೂ ಕೆಜಿಎಫ್‌ ತಾಲ್ಲೂಕಿನ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಇದರ ಬೆನ್ನಲ್ಲೇ ಹೊಸದಾಗಿ 535 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 3,936ಕ್ಕೆ ಜಿಗಿದಿದೆ. ಕೋಲಾರ ತಾಲ್ಲೂಕಿನ 245 ಮಂದಿಗೆ, ಮಾಲೂರು ತಾಲ್ಲೂಕಿನ 112 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 34 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 51 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 39 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 54 ಮಂದಿಗೆ ಸೋಂಕು ಬಂದಿದೆ.

ADVERTISEMENT

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 404 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 135 ಮಂದಿ, ಮಾಲೂರು ತಾಲ್ಲೂಕಿನ 84, ಬಂಗಾರಪೇಟೆ ತಾಲ್ಲೂಕಿನ 35, ಕೆಜಿಎಫ್‌ ತಾಲ್ಲೂಕಿನ 42, ಮುಳಬಾಗಿಲು ತಾಲ್ಲೂಕಿನ 76 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 32 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.