ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸರಣಿ ಮುಂದುವರಿದಿದ್ದು, ಭಾನುವಾರ ಇಬ್ಬರು ಸೋಂಕಿತರು ಕೊನೆಯುಸಿರೆಳೆದಿದ್ದಾರೆ.
ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಿದ್ದ ಸೋಂಕಿತರ ಪೈಕಿ ಕೆಜಿಎಫ್ ತಾಲ್ಲೂಕಿನ ಇಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಾವಿನ ಸಂಖ್ಯೆ 74ಕ್ಕೆ ಏರಿಕೆಯಾಗಿದೆ. ಇದರ ಬೆನ್ನೆಲ್ಲೇ ಹೊಸದಾಗಿ 78 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 786ಕ್ಕೆ ಜಿಗಿದಿದೆ.
ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 32 ಮಂದಿಗೆ ಸೋಂಕು ತಗುಲಿದೆ. ಉಳಿದಂತೆ ಮಾಲೂರು ತಾಲ್ಲೂಕಿನ 16, ಬಂಗಾರಪೇಟೆ ತಾಲ್ಲೂಕಿನ 9, ಕೆಜಿಎಫ್ ತಾಲ್ಲೂಕಿನ 4, ಮುಳಬಾಗಿಲು ತಾಲ್ಲೂಕಿನ 10 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 7 ಮಂದಿಗೆ ಸೋಂಕು ಬಂದಿರುವುದು ಖಚಿತವಾಗಿದೆ.
ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 54 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಭಾನುವಾರ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 12 ಮಂದಿ, ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 11 ಮಂದಿ, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಇಬ್ಬರು, ಕೆಜಿಎಫ್ ತಾಲ್ಲೂಕಿನ 16 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.