ADVERTISEMENT

ಇಬ್ಬರು ಸೋಂಕಿತರ ಸಾವು

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2020, 4:27 IST
Last Updated 13 ಅಕ್ಟೋಬರ್ 2020, 4:27 IST

ಕೋಲಾರ: ಜಿಲ್ಲೆಯಲ್ಲಿ ಸೋಮವಾರ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 119ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಮಾಲೂರು ಮತ್ತು ಕೆಜಿಎಫ್ ತಾಲ್ಲೂಕಿನ ತಲಾ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಇದರ ಬೆನ್ನಲ್ಲೇ ಹೊಸದಾಗಿ 65 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 1,551ಕ್ಕೆ ಜಿಗಿದಿದೆ.

ADVERTISEMENT

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 18 ಮಂದಿಗೆ ಸೋಂಕು ತಗುಲಿದೆ. ಮಾಲೂರು ತಾಲ್ಲೂಕಿನ 17, ಬಂಗಾರಪೇಟೆ ತಾಲ್ಲೂಕಿನ 6, ಕೆಜಿಎಫ್ ತಾಲ್ಲೂಕಿನ 15 ಮತ್ತು ಮುಳಬಾಗಿಲು ತಾಲ್ಲೂಕಿನ 9 ಮಂದಿಗೆ ಸೋಂಕು ಹರಡಿರುವುದು ಖಚಿತವಾಗಿದೆ.

118 ಮಂದಿ ಗುಣಮುಖ: ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 118 ಮಂದಿ ಗುಣಮುಖರಾಗಿ ಭಾನುವಾರ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 47 ಮಂದಿ, ಮಾಲೂರು ತಾಲ್ಲೂಕಿನ 26, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 10 ಮಂದಿ, ಕೆಜಿಎಫ್‌ ತಾಲ್ಲೂಕಿನ 12 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 13 ಮಂದಿಯನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.