ADVERTISEMENT

ಕೋಲಾರ: ಇಬ್ಬರು ಕೊರೊನಾ ಸೋಂಕಿತರ ಸಾವು

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 14:54 IST
Last Updated 24 ಸೆಪ್ಟೆಂಬರ್ 2020, 14:54 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪೈಕಿ ಗುರುವಾರ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 57 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 840ಕ್ಕೆ ಜಿಗಿದಿದೆ. ಮುಖ್ಯವಾಗಿ ವಿಷಮ ಶೀತ ಜ್ವರದಿಂದ ಬಳಲುತ್ತಿರುವವರಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಂಡಿದೆ.

ಹೊಸದಾಗಿ ಪತ್ತೆಯಾದ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಗಿದೆ. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.