ADVERTISEMENT

ಸಾವಿನ ಸಂಖ್ಯೆ 172ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2020, 12:31 IST
Last Updated 2 ಡಿಸೆಂಬರ್ 2020, 12:31 IST

ಕೋಲಾರ: ಜಿಲ್ಲೆಯಲ್ಲಿ ಬುಧವಾರ ಒಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 172ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲಾಗಿರುವ ಸೋಂಕಿತರ ಪೈಕಿ ಕೆಜಿಎಫ್‌ ತಾಲ್ಲೂಕಿನ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಹೊಸದಾಗಿ 12 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 130ಕ್ಕೆ ಜಿಗಿದಿದೆ.

ಕೋಲಾರ ತಾಲ್ಲೂಕಿನ 8 ಮಂದಿ, ಬಂಗಾರಪೇಟೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರು, ಮುಳಬಾಗಿಲು ತಾಲ್ಲೂಕಿನ ಇಬ್ಬರಿಗೆ ಸೋಂಕು ತಗುಲಿದೆ. ಇವರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 9 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 6, ಮಾಲೂರು ತಾಲ್ಲೂಕಿನ ಇಬ್ಬರು, ಮತ್ತು ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.