ADVERTISEMENT

ಸೋಂಕಿತರ ಸಾವಿನ ಸಂಖ್ಯೆ 541ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 15:14 IST
Last Updated 15 ಜುಲೈ 2021, 15:14 IST

ಕೋಲಾರ: ಜಿಲ್ಲೆಯಲ್ಲಿ ಗುರುವಾರ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 541ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಬಂಗಾರಪೇಟೆ ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಕೊನೆಯುಸಿರೆಳೆದಿದ್ದಾರೆ.

ಇದರ ಬೆನ್ನಲ್ಲೇ ಹೊಸದಾಗಿ 36 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 741ಕ್ಕೆ ಇಳಿದಿದೆ. ಕೋಲಾರ ತಾಲ್ಲೂಕಿನ 9 ಮಂದಿಗೆ, ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 6 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ ಒಬ್ಬರಿಗೆ, ಶ್ರೀನಿವಾಸಪುರ ತಾಲ್ಲೂಕಿನ 14 ಮಂದಿಗೆ ಸೋಂಕು ಬಂದಿದೆ.

ADVERTISEMENT

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 70 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 28 ಮಂದಿ, ಮಾಲೂರು ತಾಲ್ಲೂಕಿನ 15, ಬಂಗಾರಪೇಟೆ ತಾಲ್ಲೂಕಿನ 6, ಕೆಜಿಎಫ್‌ ತಾಲ್ಲೂಕಿನ 9, ಮುಳಬಾಗಿಲು ತಾಲ್ಲೂಕಿನ 7 ಮತ್ತು ಶ್ರೀನಿವಾಸಪುರ ತಾಲ್ಲೂಕಿನ 5 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.