ADVERTISEMENT

ಕೋಲಾರ: ಸೋಂಕಿತರ ಸಾವಿನ ಸಂಖ್ಯೆ 576ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 14:09 IST
Last Updated 4 ಆಗಸ್ಟ್ 2021, 14:09 IST

ಕೋಲಾರ: ಜಿಲ್ಲೆಯಲ್ಲಿ ಬುಧವಾರ ಇಬ್ಬರು ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 576ಕ್ಕೆ ಏರಿಕೆಯಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 49 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 258ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನ 15 ಮಂದಿಗೆ, ಮಾಲೂರು, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 7 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 5 ಮಂದಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 8 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 42 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ 8 ಮಂದಿ, ಮಾಲೂರು ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ 6 ಮಂದಿ, ಬಂಗಾರಪೇಟೆ ತಾಲ್ಲೂಕಿನ 5, ಮುಳಬಾಗಿಲು ತಾಲ್ಲೂಕಿನ 9 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.