ADVERTISEMENT

ಕೋಲಾರ: ಸೋಂಕಿತರ ಸಾವಿನ ಸಂಖ್ಯೆ 584ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2021, 14:22 IST
Last Updated 6 ಆಗಸ್ಟ್ 2021, 14:22 IST

ಕೋಲಾರ: ಜಿಲ್ಲೆಯಲ್ಲಿ ಶುಕ್ರವಾರ 5 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 584ಕ್ಕೆ ಏರಿಕೆಯಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ, ಬಂಗಾರಪೇಟೆ ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ ಒಬ್ಬರು, ಶ್ರೀನಿವಾಸಪುರ ತಾಲ್ಲೂಕಿನ ಇಬ್ಬರು ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 45 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 267ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನ 17 ಮಂದಿಗೆ, ಮಾಲೂರು ತಾಲ್ಲೂಕಿನ ಒಬ್ಬರಿಗೆ, ಬಂಗಾರಪೇಟೆ ತಾಲ್ಲೂಕಿನ 6 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 5 ಮಂದಿಗೆ, ಮುಳಬಾಗಿಲು ತಾಲ್ಲೂಕಿನ ಮೂವರಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 13 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 31 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 11 ಮಂದಿ, ಮಾಲೂರು, ಬಂಗಾರಪೇಟೆ, ಕೆಜಿಎಫ್‌ ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ 5 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.