ADVERTISEMENT

ಸೋಂಕಿತರ ಸಾವಿನ ಸಂಖ್ಯೆ 592ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 13:34 IST
Last Updated 8 ಆಗಸ್ಟ್ 2021, 13:34 IST

ಕೋಲಾರ: ಜಿಲ್ಲೆಯಲ್ಲಿ ಭಾನುವಾರ 3 ಮಂದಿ ಕೊರೊನಾ ಸೋಂಕಿತರು ಮೃತಪಟ್ಟಿದ್ದು, ಒಟ್ಟಾರೆ ಸೋಂಕಿತರ ಸಾವಿನ ಸಂಖ್ಯೆ 592ಕ್ಕೆ ಏರಿಕೆಯಾಗಿದೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ ತಾಲ್ಲೂಕಿನ ಇಬ್ಬರು ಹಾಗೂ ಕೆಜಿಎಫ್‌ ತಾಲ್ಲೂಕಿನ ಒಬ್ಬರು ಸೋಂಕಿತರು ಕೊನೆಯುಸಿರೆಳೆದಿದ್ದಾರೆ. ಇದರ ಬೆನ್ನಲ್ಲೇ ಹೊಸದಾಗಿ 36 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.

ಕೋಲಾರ ತಾಲ್ಲೂಕಿನ 14 ಮಂದಿಗೆ, ಮಾಲೂರು ತಾಲ್ಲೂಕಿನ 5 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 6 ಮಂದಿಗೆ, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 4 ಮಂದಿಗೆ, ಶ್ರೀನಿವಾಸಪುರ ತಾಲ್ಲೂಕಿನ 3 ಮಂದಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ ಇಬ್ಬರು, ಮುಳಬಾಗಿಲು ತಾಲ್ಲೂಕಿನ 4 ಮಂದಿ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 6 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.