ADVERTISEMENT

ಸೋಂಕಿತರ ಸಾವಿನ ಸಂಖ್ಯೆ 628ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2021, 13:57 IST
Last Updated 18 ಸೆಪ್ಟೆಂಬರ್ 2021, 13:57 IST

ಕೋಲಾರ: ಜಿಲ್ಲೆಯ ಕೆಜಿಎಫ್‌ ತಾಲ್ಲೂಕಿನ ಕೊರೊನಾ ಸೋಂಕಿತರೊಬ್ಬರು ಶನಿವಾರ ಮೃತಪಟ್ಟಿದ್ದು, ಸೋಂಕಿತರ ಸಾವಿನ ಸಂಖ್ಯೆ 628ಕ್ಕೆ ಏರಿಕೆಯಾಗಿದೆ.

ಇದರ ಬೆನ್ನಲ್ಲೇ ಹೊಸದಾಗಿ 19 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 91ಕ್ಕೆ ಜಿಗಿದಿದೆ. ಕೋಲಾರ ಮತ್ತು ಕೆಜಿಎಫ್‌ ತಾಲ್ಲೂಕಿನ ತಲಾ 5 ಮಂದಿಗೆ, ಮಾಲೂರು, ಬಂಗಾರಪೇಟೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರಿಗೆ, ಮುಳಬಾಗಿಲು ತಾಲ್ಲೂಕಿನ 6 ಮಂದಿಗೆ ಸೋಂಕು ಬಂದಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ADVERTISEMENT

ಕೋಲಾರ ತಾಲ್ಲೂಕಿನ 4 ಮಂದಿ, ಬಂಗಾರಪೇಟೆ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ 3 ಮಂದಿ, ಕೆಜಿಎಫ್‌ ಇಬ್ಬರು, ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.