ADVERTISEMENT

ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2021, 13:28 IST
Last Updated 23 ಜನವರಿ 2021, 13:28 IST

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗಿದ್ದು, ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 14 ಮಂದಿ ಗುಣಮುಖರಾಗಿ ಶನಿವಾರ ಮನೆಗೆ ಮರಳಿದರು.

ಕೋಲಾರ ಮತ್ತು ಮಾಲೂರು ತಾಲ್ಲೂಕಿನ ತಲಾ 4 ಮಂದಿ, ಬಂಗಾರಪೇಟೆ ತಾಲ್ಲೂಕಿನ 3, ಕೆಜಿಎಫ್‌ ತಾಲ್ಲೂಕಿನ ಇಬ್ಬರು ಹಾಗೂ ಮುಳಬಾಗಿಲು ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು.

ಹೊಸದಾಗಿ ಬಂಗಾರಪೇಟೆ ತಾಲ್ಲೂಕಿನ ಒಬ್ಬರಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ. ಈ ಸೋಂಕಿತ ವ್ಯಕ್ತಿಯ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.