ಕೋಲಾರ: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಲ್ಲಿ 3 ಮಂದಿ ಗುಣಮುಖರಾಗಿ ಬುಧವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 16ಕ್ಕೆ ಇಳಿಕೆಯಾಗಿದೆ.
ಕೆಜಿಎಫ್ ತಾಲ್ಲೂಕಿನ ಇಬ್ಬರು ಮತ್ತು ಕೋಲಾರ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ ಕೋಲಾರ ತಾಲ್ಲೂಕಿನ 3 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಇವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.