ADVERTISEMENT

ಸೋಂಕಿತರ ಸಂಖ್ಯೆ 12ಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2022, 13:35 IST
Last Updated 10 ಮಾರ್ಚ್ 2022, 13:35 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ 3 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ಗುರುವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 12ಕ್ಕೆ ಇಳಿಕೆಯಾಗಿದೆ.

ಕೋಲಾರ, ಮಾಲೂರು ಹಾಗೂ ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಹರಡಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಮನೆಗಳಲ್ಲೇ ಕ್ವಾರಂಟೈನ್‌ ಆಗಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 6 ಮಂದಿ ಗುಣಮುಖರಾಗಿದ್ದಾರೆ. ಕೋಲಾರ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಇಬ್ಬರು, ಕೆಜಿಎಫ್‌ ಹಾಗೂ ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಗುಣಮುಖರಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.