ADVERTISEMENT

ಸೋಂಕಿತರ ಸಂಖ್ಯೆ 111ಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2021, 14:53 IST
Last Updated 11 ಸೆಪ್ಟೆಂಬರ್ 2021, 14:53 IST

ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 111ಕ್ಕೆ ಇಳಿಕೆಯಾಗಿದೆ.

ಮುಳಬಾಗಿಲು ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 29 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು. ಕೋಲಾರ ತಾಲ್ಲೂಕಿನ 15 ಮಂದಿ, ಕೆಜಿಎಫ್‌ ತಾಲ್ಲೂಕಿನ 5, ಮುಳಬಾಗಿಲು ತಾಲ್ಲೂಕಿನ 8 ಮಂದಿ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.