ADVERTISEMENT

ಸೋಂಕಿತರ ಸಂಖ್ಯೆ 16ಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 13:27 IST
Last Updated 1 ಮಾರ್ಚ್ 2021, 13:27 IST

ಕೋಲಾರ: ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಲ್ಲಿ 4 ಮಂದಿ ಗುಣಮುಖರಾಗಿ ಸೋಮವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 16ಕ್ಕೆ ಇಳಿಕೆಯಾಗಿದೆ.

ಕೆಜಿಎಫ್‌ ತಾಲ್ಲೂಕಿನ ಇಬ್ಬರು, ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ ಶ್ರೀನಿವಾಸಪುರ ತಾಲ್ಲೂಕಿನ ಒಬ್ಬರಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.ಈ ಸೋಂಕಿತ ವ್ಯಕ್ತಿಯ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಇವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT