ADVERTISEMENT

ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 16ಕ್ಕೆ ಇಳಿಕೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2021, 16:57 IST
Last Updated 27 ಫೆಬ್ರುವರಿ 2021, 16:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕೋಲಾರ: ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಲ್ಲಿ 3 ಮಂದಿ ಗುಣಮುಖರಾಗಿ ಶನಿವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 16ಕ್ಕೆ ಇಳಿಕೆಯಾಗಿದೆ.

ಕೋಲಾರ ತಾಲ್ಲೂಕಿನ ಇಬ್ಬರು ಮತ್ತು ಕೆಜಿಎಫ್‌ ತಾಲ್ಲೂಕಿನ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ ಇಬ್ಬರಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.

ಕೋಲಾರ ಮತ್ತು ಶ್ರೀನಿವಾಸಪುರ ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಇವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.