ಕೋಲಾರ: ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೊರೊನಾ ಸೋಂಕಿತರಲ್ಲಿ 4 ಮಂದಿ ಗುಣಮುಖರಾಗಿ ಸೋಮವಾರ ಮನೆಗೆ ಮರಳಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 24ಕ್ಕೆ ಇಳಿಕೆಯಾಗಿದೆ.
ಮಾಲೂರು ತಾಲ್ಲೂಕಿನ ಇಬ್ಬರು, ಕೋಲಾರ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರನ್ನು ಆಸ್ಪತ್ರೆಯಿಂದ ಬೀಳ್ಕೊಡಲಾಯಿತು. ಹೊಸದಾಗಿ 3 ಮಂದಿಗೆ ಸೋಂಕು ಹರಡಿರುವುದು ದೃಢಪಟ್ಟಿದೆ.
ಮಾಲೂರು, ಕೆಜಿಎಫ್ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರಿಗೆ ಸೋಂಕು ಬಂದಿದೆ. ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಇವರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.