ADVERTISEMENT

ಕೋಲಾರ: ಜಿಲ್ಲೆಯಲ್ಲಿ ಸೋಂಕು ಇಳಿಕೆ, ಸಾವು ಏರಿಕೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2021, 15:07 IST
Last Updated 2 ಜೂನ್ 2021, 15:07 IST
ಕೊರೊನಾ ವೈರಸ್‌ ಸೋಂಕು (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ ಸೋಂಕು (ಸಾಂದರ್ಭಿಕ ಚಿತ್ರ)   

ಕೋಲಾರ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ನಾಗಾಲೋಟ ಮುಂದುವರಿದಿದ್ದು, ಬುಧವಾರ 3 ಮಂದಿ ಮೃತಪಟ್ಟಿದ್ದಾರೆ.

ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ ಕೋಲಾರ, ಕೆಜಿಎಫ್‌ ಮತ್ತು ಮುಳಬಾಗಿಲು ತಾಲ್ಲೂಕಿನ ತಲಾ ಒಬ್ಬರು ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಸೋಂಕಿತರ ಸಾವಿನ ಸಂಖ್ಯೆ 387ಕ್ಕೆ ಏರಿಕೆಯಾಗಿದೆ.

ಸೋಂಕು ಹರಡುವಿಕೆ ಪ್ರಮಾಣ ಕೊಂಚ ಇಳಿಕೆಯಾಗಿದ್ದು, ಹೊಸದಾಗಿ 389 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 131 ಮಂದಿಗೆ ಸೋಂಕು ತಗುಲಿದೆ. ಮಾಲೂರು ತಾಲ್ಲೂಕಿನ 74 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 57 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 21 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 51 ಮಂದಿಗೆ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 55 ಮಂದಿಗೆ ಸೋಂಕು ಬಂದಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ 6,663ಕ್ಕೆ ಜಿಗಿದಿದೆ.

ADVERTISEMENT

ಹೊಸದಾಗಿ ಪತ್ತೆಯಾದ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ.

ಮಂಗಳವಾರ ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಗುಣಮುಖ ಪ್ರಮಾಣ ಕೊಂಚ ಏರಿಕೆಯಾಗಿದೆ. ಜಿಲ್ಲಾ ಕೇಂದ್ರದ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 456 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 176 ಮಂದಿ, ಮಾಲೂರು ತಾಲ್ಲೂಕಿನ 89, ಬಂಗಾರಪೇಟೆ ತಾಲ್ಲೂಕಿನ 34, ಕೆಜಿಎಫ್‌ ತಾಲ್ಲೂಕಿನ 54, ಮುಳಬಾಗಿಲು ತಾಲ್ಲೂಕಿನ 35 ಮಂದಿ ಮತ್ತು ಶ್ರೀನಿವಾಸಪುರ ತಾಲ್ಲೂಕಿನ 68 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.