ADVERTISEMENT

ಜಿಂಕೆ ಕೊಂಬು ಮಾರಾಟ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 24 ಜೂನ್ 2018, 16:41 IST
Last Updated 24 ಜೂನ್ 2018, 16:41 IST
ಬಂಗಾರಪೇಟೆ ಅರಣ್ಯ ಅಧಿಕಾರಿಗಳು ಬಂಧಿಸಿರುವ ಮೂವರು ಆರೋಪಿಗಳು
ಬಂಗಾರಪೇಟೆ ಅರಣ್ಯ ಅಧಿಕಾರಿಗಳು ಬಂಧಿಸಿರುವ ಮೂವರು ಆರೋಪಿಗಳು   

ಬಂಗಾರಪೇಟೆ: ಜಿಂಕೆ ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮೂವರನ್ನು ಬಂಧಿಸಿ, ಎರಡು ಜಿಂಕೆ ಕೊಂಬುಗಳನ್ನು ವಶಕ್ಕೆ ಪಡೆದಿದ್ದಾರೆ.

ಆಂಧ್ರಪ್ರದೇಶದ ಕುಪ್ಪಂ ತಾಲ್ಲೂಕಿನ ಸಮಂತ್, ಪ್ರಥಮ್ ಮತ್ತು ಬಂಗಾರಪೇಟೆ ತಾಲ್ಲೂಕಿನ ಬೋಡಗೂರ್ಕಿ ಗ್ರಾಮದ ಕೃಷ್ಣಪ್ಪ ಬಂಧಿತ ಆರೋಪಿಗಳು.‌

ಶನಿವಾರ ರಾತ್ರಿ ಅರಣ್ಯ ಸಿಬ್ಬಂದಿ ಗಸ್ತಿನಲ್ಲಿದ್ದ ಸಂದರ್ಭ ಬೋಡಗೂರ್ಕಿ ಬಳಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅವರ ಬಳಿ ಎರಡು ದೊಡ್ಡ ಮಚ್ಚು, ಬಿಲ್ ಹುಕ್, ಟಾರ್ಚ್, ಸೀಸ ದೊರೆತಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

‘ರಾಜ್ಯದ ಅರಣ್ಯ ಪ್ರದೇಶದಲ್ಲಿ ಜಿಂಕೆಗಳನ್ನು ಸಾಯಿಸಿ, ಕೊಂಬುಗಳನ್ನು ಮಾರಾಟ ಮಾಡುತ್ತಿದ್ದರು ಎನ್ನುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ವಿಚಾರಣೆಯಲ್ಲಿ ಮತ್ತಷ್ಟು ಮಾಹಿತಿ ಕಲೆಹಾಕಲಾಗುವುದು ಎಂದು ವಲಯ ಅರಣ್ಯ ಅಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.