ADVERTISEMENT

ಕೋಲಾರ: ನಕಲಿ ಬಿತ್ತನೆ ಬೀಜ ಕಂಪನಿಗಳ ವಿರುದ್ದ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 31 ಮೇ 2023, 16:05 IST
Last Updated 31 ಮೇ 2023, 16:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಕೋಲಾರ: ಟೊಮೆಟೊಗೆ ಬಾಧಿಸುತ್ತಿರುವ ಬಿಂಗಿ (ಎಲೆ ಮುದುಡು) ರೋಗ ನಿಯಂತ್ರಣಕ್ಕೆ ವಿಶೇಷ ವಿಜ್ಞಾನಿಗಳ ತಂಡ ರಚಿಸಿ ಕಳಪೆ ಬಿತ್ತನೆ ಬೀಜ ಕೀಟ ನಾಶಕ ವಿತರಣೆ ಮಾಡುವ ಕಂಪನಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ರೈತ ಸಂಘದ ಪ್ರತಿನಿಧಿಗಳು ಮಂಗಳವಾರ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದರು.

‘ಹೊಸದಾಗಿ ಆಯ್ಕೆ ಆಗಿರುವ 6 ಶಾಸಕರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ಸರ್ಕಾರದ ಮೇಲೆ ಒತ್ತಡ ಹಾಕಿ ರೋಗದಿಂದ ನಷ್ಟವಾಗಿರುವ ಪ್ರತಿ ಎಕರೆಗೆ ₹ 5 ಲಕ್ಷ ಪರಿಹಾರ ವಿತರಿಸಬೇಕು. ನಕಲಿ ಬಿತ್ತನೆ ಬೀಜ, ಕ್ರಿಮಿನಾಶಕ ಕಂಪನಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿ ‌ರೈತರ ಪರ ನಿಲ್ಲಬೇಕು’ ಎಂದು ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.

‘ಜಿಲ್ಲೆಗೆ ಕೆ.ಸಿ ವ್ಯಾಲಿ ನೀರು ಹರಿದ ನಂತರ ಅಂತರ್ಜಲ ಅಭಿವೃದ್ದಿ ಒಂದು ಕಡೆಯದರೆ ಮತ್ತೊಂದು ಕಡೆ ಬೆಳೆಗಳಿಗೆ ಭಾಧಿಸುತ್ತಿರುವ ಭೀಕರವಾದ ರೋಗಗಳ ನಿಯಂತ್ರಣಕ್ಕೆ ಬಾರದೆ ಹಾಕಿದ ಬಂಡವಾಳ ರೈತರ ಕೈಗೆ ಸಿಗುತ್ತಿಲ್ಲ’ ಎಂದರು.

ADVERTISEMENT

ಜಿಲ್ಲಾ ಕಾರ್ಯದ್ಯಕ್ಷ ವಕ್ಕಲೇರಿ ಹನುಮಯ್ಯ, ಜಿಲ್ಲಾದ್ಯಕ್ಷ ಈಕಂಬಳ್ಳಿ ಮಂಜುನಾಥ್, ಮಂಗಸಂದ್ರ ತಿಮ್ಮಣ್ಣ, ಕುವ್ವಣ್ಣ, ವೆಂಕಟೇಶಪ್ಪ, ಗೋವಿಂದಪ್ಪ, ಯಲ್ಲಪ್ಪ, ಹರೀಶ್, ವೆಂಕಟೇಶ್, ಕದರಿನತ್ತ ಅಪ್ಪೋಜಿರಾವ್, ರಾಮಸಾಗರ ವೇಣು, ಸುರೇಶ್ ಬಾಬು, ಯಲುವಳ್ಳಿ ಪ್ರಭಾಕರ್, ಆನಂದ್‍ರೆಡ್ಡಿ, ಗಿರೀಶ್, ಪಾರುಕ್‍ಪಾಷ, ಬಂಗಾರಿ ಮಂಜು, ವಿಜಯ್‍ಪಾಲ್, ವಿಶ್ವ, ಭಾಸ್ಕರ್, ರಾಜೇಶ್, ದೇವರಾಜ್, ಗುರುಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.