ಬಂಗಾರಪೇಟೆ: ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಸಹಕಾರ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಅನುಕೂಲಕರ ವಿಧೇಯಕ ಮಂಡನೆಗೆ ವಿರೋಧ ವ್ಯಕ್ತಪಡಿಸಿರುವ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂದು ಕರ್ನಾಟಕ ದಲಿತ ರೈತ ಸೇನೆ ರಾಜ್ಯಾಧ್ಯಕ್ಷ ಹುಣಸನಹಳ್ಳಿ ಎನ್.ವೆಂಕಟೇಶ್ ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರವು ಪರಿಶಿಷ್ಟ ಜಾತಿ. ಪಂಗಡಗಳ ಹಾಗೂ ಹಿಂದುಳಿದ ವರ್ಗದವರ ಅಭಿವೃದ್ಧಿಗೆ ಆದ್ಯತೆ ನೀಡಲು ಸಹಕಾರ ಕ್ಷೇತ್ರಗಳಲ್ಲಿ ಅವಕಾಶ ಕಲ್ಪಿಸುವ ಸಹಕಾರಿ ವಿಧೇಯಕ ಮಂಡಿಸಿದ್ದು, ಇದನ್ನು ವಿರೋಧಿಸಿದ್ದಾರೆ. ಸಹಕಾರ ಕ್ಷೇತ್ರದಲ್ಲಿ ದಲಿತರಿಗೆ ಅವಕಾಶ ಕೊಡದಂತೆ ವಿರೋಧಿಸಿರುವುದು ಸರಿಯಲ್ಲ ಎಂದು ಕಟುವಾಗಿ ನುಡಿದರು.
ಜಿ.ಟಿ.ದೇವೇಗೌಡ ಶಾಸಕರನ್ನಾಗಿ ಮಾಡಿರುವುದು ಸಂವಿಧಾನವೇ ಹೊರತು ಯಾವುದೇ ಗ್ರಂಥವಲ್ಲ. ಸಂವಿಧಾನದ ಆಶಯವನ್ನು ಗಾಳಿಗೆ ತೂರಿ ದಲಿತರಿಗೆ ಸಹಕಾರ ಕ್ಷೇತ್ರದಲ್ಲಿ ಅವಕಾಶ ನೀಡಬಾರದೆಂದು ವಿರೋಧಿಸಿರುವ ಅವರ ವಿರುದ್ಧ ಎಸ್‌ಸಿ, ಎಸ್‌ಟಿ ಹಕ್ಕುಗಳ ಉಲ್ಲಂಘನೆ ಕಾಯ್ದೆಯಡಿ ದೂರು ದಾಖಲಿಸಿ ಬಂಧಿಸಬೇಕು. ಜೊತೆಗೆ ಅವರನ್ನು ಪಕ್ಷದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.