ಬಂಗಾರಪೇಟೆ: ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಂಬರೀಕರಣ ಮಾಡಲು ಕೀರುಮಂದೆ ಗ್ರಾಮಸ್ಥರು ಆಗ್ರಹಿಸಿದರು.
ತಾಲ್ಲೂಕಿನ ತೊಪ್ಪನಹಳ್ಳಿ ಗ್ರಾಮ ಪಂಚಾಯಿತಿ ದೊಡ್ಡ ಬೊಂಪಲ್ಲಿಯಿಂದ ಕೀರಮಂದೆ ಗ್ರಾಮದವರೆಗೆ 1.5 ಕಿ.ಮೀ ರಸ್ತೆ ಹಾಳಾಗಿದೆ. ಜಲ್ಲಿಕಲ್ಲು ಹಾಕಿ ಮೂರು ತಿಂಗಳಾಗಿದೆ. ಇದುವರೆಗೂ ಗುತ್ತಿಗೆದಾರ ಗ್ರಾಮದ ಕಡೆ ಮುಖ ಮಾಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.
ಈ ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಗಲಲ್ಲೇ ವಾಹನಗಳು ಹರಸಾಹಸ ಪಡಬೇಕಾಗಿದೆ ಎಂದು ಗ್ರಾಮದ ನಿವಾಸಿ ರಾಘವೇಂದ್ರ ದೂರಿದರು.
ಕಾಲೇಜು ವಿದ್ಯಾರ್ಥಿಗಳು ಜಲ್ಲಿ ಕಲ್ಲುಗಳಿಂದ ತುಂಬಿರುವ ರಸ್ತೆಯಲ್ಲಿ ಸಮಯಕ್ಕೆ ಹೋಗಲಾಗದ ಪರಿಸ್ಥಿತಿ ಇದೆ. ಅರ್ಧಕ್ಕೆ ನಿಂತಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಕೀರುಮಂದೆ ಗ್ರಾಮ ಮುಖ್ಯ ರಸ್ತೆಗೆ ಅತಿ ಜರೂರಾಗಿ ಡಾಂಬರೀಕರಣ ಮಾಡಲು ಸೂಕ್ತಕ್ರಮ ಕೈಗೊಳ್ಳುವುದಾಗಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಎಂಜಿನಿಯರ್ ರವಿಚಂದ್ರ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.