ADVERTISEMENT

ಕೆ.ಸಿ.ನಾರಾಯಣಗೌಡ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಲು ಒತ್ತಾಯ

ಕರವೇ ಕಾರ್ಯಕರ್ತರಿಂದ ಧರಣಿ, ಪ್ರತಿ ಕೃತಿ ದಹನ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2020, 13:46 IST
Last Updated 28 ಫೆಬ್ರುವರಿ 2020, 13:46 IST
ಮಹಾರಾಷ್ಟ್ರಕ್ಕೆ ಜೈಕಅರ ಹಾಕಿರುವ ಸಚಿವ ನಾರಾಯಣಗೌಡರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕೋಲಾರದಲ್ಲಿ ಶುಕ್ರವಾರ ಧರಣಿ ನಡೆಸಿ ಪ್ರತಿಕೃತಿ ದಹಿಸಿದರು.
ಮಹಾರಾಷ್ಟ್ರಕ್ಕೆ ಜೈಕಅರ ಹಾಕಿರುವ ಸಚಿವ ನಾರಾಯಣಗೌಡರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕೋಲಾರದಲ್ಲಿ ಶುಕ್ರವಾರ ಧರಣಿ ನಡೆಸಿ ಪ್ರತಿಕೃತಿ ದಹಿಸಿದರು.   

ಕೋಲಾರ: ಮಹಾರಾಷ್ಟ್ರಕ್ಕೆ ಜೈಕಾರ ಹಾಕಿರುವ ಪೌರಾಡಳಿತ ಸಚಿವ ಕೆ.ಸಿ.ನಾರಾಯಣಗೌಡ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಇಲ್ಲಿನ ಬಸ್ ನಿಲ್ದಾಣದ ವೃತ್ತದಲ್ಲಿ ಶುಕ್ರಮವಾರ ಧರಣಿ ನಡೆಸಿದರು.

ನಗರದ ಬಸ್ ನಿಲ್ದಾಣದಲ್ಲಿ ಜಮಾಯಿಸಿದ ವೇದಿಕೆಯ ಕಾರ್ಯಕರ್ತರು, ಸಚಿವ ನಾರಾಯಣಗೌಡರ ವಿರುದ್ಧ ಘೋಷಣೆ ಕೂಗಿ ಪ್ರತಿಕೃತಿ ದಹಿಸಿ, ಆಕ್ರೋಶವ್ಯಕ್ತಪಡಿಸಿದರು.

ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ರಾಘವೇಂದ್ರ ಮಾತನಾಡಿ, ‘ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯ ಶಾಸಕ ಹಾಗೂ ಪೌರಾಡಳಿತ ಸಚಿವ ಕೆ.ಸಿ.ನಾರಾಯಣಗೌಡ ಖಾಸಗಿ ಕಾರ್ಯಕ್ರಮವೊಂದರಲ್ಲಿ ಜೈ ಮಹಾರಾಷ್ಟ್ರ ಎಂದು ಕೂಗುವ ಮೂಲಕ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಉಂಟು ಮಾಡಿದ್ದಾರೆ’ ಎಂದು ಆಕ್ರೋಪಿಸಿದರು.

ADVERTISEMENT

‘ಓಟ್ ಬ್ಯಾಂಕ್ ರಾಜಕಕೀಯಕ್ಕಾಗಿ ಕನ್ನಡಿಗರನ್ನು ಕಡೆಗಣಿಸಿರುವ ಸಚಿವ ಕೆ.ಸಿ.ನಾರಾಯಣಗೌಡ ಅವರನ್ನು ಈ ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು, ಜತೆಗೆ ರಾಜ್ಯದ ಜನತೆಯ ಮುಂದೆ ಪರ ರಾಜ್ಯಕ್ಕೆ ಜೈಕಾರ ಹಾಕಿರುವುದಕ್ಕೆ ಕನ್ನಡಿಗರಲ್ಲಿ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯ ಸಚಿವ ಸಂಪುಟದ ಸಚಿವರಾಗಿರುವ ಅವರು ಅಭಿವೃದ್ಧಿ ಕಡೆ ಗಮನಹರಿಸದೆ ಪರ ರಾಜ್ಯಕ್ಕೆ ಜೈಕಾರ ಕೂಗುವುದು ಅದನ್ನು ಸಮರ್ಥಿಸಿಕೊಳ್ಳುವುದು ಸಚಿವ ಸ್ಥಾನಕ್ಕೆ ಶೋಭೆ ತರುವಂತದ್ದಲ್ಲ. ನೈತಿಕೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.

‘ಕನ್ನಡ ವಿರೋಧಿ ಘೋಷಣೆ ಕೂಗಿರುವ ನಾರಾಯಣಗೌಡರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇತ್ತೀಚಿಗೆ ರಾಜ್ಯದಲ್ಲಿ ಕೆಲ ಶಾಸಕರು ಜನ ವಿರೋಧಿಗಳನ್ನು ನೀಡುವ ಮೂಲಕ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದು ಮುಂದುವಯದಂತೆ ಎಚ್ಚರವಹಿಸಬೇಕು’ ಎಂದು ಮನವಿ ಮಾಡಿದರು.

ವೇದಿಕೆಯ ಜಿಲ್ಲಾ ಘಟಕದ ಉಪಾದ್ಯಕ್ಷರಾದ ಎಲ್.ಎಂ.ರಾಜು, ಹೈದರ್ ಷರೀಪ್, ಲತಾಬಾಯಿಮಾಡಿಕ್, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ಶ್ರೀನಿವಾಸ್, ಸದಸ್ಯರಾದ ನವೀನ್, ರಾಮ್‌ಪ್ರಸಾದ್, ಸಿ.ಎಂ.ಚಂದ್ರು, ಗಾಯಿತ್ರಿಬಾಯಿ, ನಾಗರತ್ನ, ಕೋದಂಡರಾಮಯ್ಯ, ಮುನೇಶ್ ಶ್ರೀನಿವಾಸ್, ಕೆ.ರಮೇಶ್, ಸುನೀಲ್ ಕುಮಾರ್, ವಿ.ರಮೇಶ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.