ADVERTISEMENT

ಕೆಜಿಎಫ್: ಕುಡಿಯುವ ನೀರು ಪೂರೈಕೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2022, 3:06 IST
Last Updated 8 ಏಪ್ರಿಲ್ 2022, 3:06 IST
ಕೆಜಿಎಫ್ ಬ್ಯಾಂಡ್‌ಲೈನ್‌ಗೆ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ನಗರಸಭೆ ಪೌರಾಯುಕ್ತ ನವೀನ್‌ ಚಂದ್ರ ಅವರಿಗೆ ಮನವಿ ಸಲ್ಲಿಸಿದರು
ಕೆಜಿಎಫ್ ಬ್ಯಾಂಡ್‌ಲೈನ್‌ಗೆ ಕುಡಿಯುವ ನೀರು ಪೂರೈಕೆಗೆ ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ನಗರಸಭೆ ಪೌರಾಯುಕ್ತ ನವೀನ್‌ ಚಂದ್ರ ಅವರಿಗೆ ಮನವಿ ಸಲ್ಲಿಸಿದರು   

ಕೆಜಿಎಫ್: ಬ್ಯಾಂಡ್‌ಲೈನ್‌ಗೆ ಶುದ್ಧನೀರು ಪೂರೈಸಿ ನೀರಿನ ಬವಣೆ ನೀಗಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ(ಕೋಡಿಹಳ್ಳಿ ಚಂದ್ರಶೇಖರ್ ಬಣ)ದ ಪದಾಧಿಕಾರಿಗಳು ನಗರಸಭೆ ಪೌರಾಯುಕ್ತ ನವೀನ್‌ ಚಂದ್ರ ಅವರಿಗೆ ಮನವಿ ಸಲ್ಲಿಸಿದರು.

ಬ್ಯಾಂಡ್‌ಲೈನ್‌ನಲ್ಲಿ ಹಲವು ವರ್ಷದಿಂದ ನೀರಿನ ಸಮಸ್ಯೆಯಿತ್ತು. ನಗರಸಭೆ ಮಾಜಿ ಸದಸ್ಯ ರಮೇಶ್ ಜೈನ್ ಅವರು ಕೊಳವೆಬಾವಿ ಕೊರೆಯಿಸಿ, ಶುದ್ಧ ನೀರಿನ ಘಟಕ ಅಳವಡಿಸಿದ್ದರು. ಪ್ರಸ್ತುತ ನೀರು ಪೂರೈಕೆ ಸ್ಥಗಿತಗೊಂಡಿದ್ದು ನಿವಾಸಿಗಳಿಗೆ ತೊಂದರೆಯಾಗಿದೆ. ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಅಲ್ಲದೇ, ನಗರದ ಬಹುತೇಕ ಬಡಾವಣೆಗಳಲ್ಲಿ ಮೂಲ ಸೌಲಭ್ಯ ಇಲ್ಲದೆ ನಾಗರಿಕರಿಗೆ ಅನನುಕೂಲವಾಗಿದೆ. ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳ ಬಳಿ ಬಂದಾಗ ಸೌಜನ್ಯದಿಂದ ನಡೆದುಕೊಳ್ಳುತ್ತಿಲ್ಲ. ವಿವಿಧ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಜಿಲ್ಲಾ ಘಟಕದ ಅಧ್ಯಕ್ಷ ರಾಮೇಗೌಡ ಒತ್ತಾಯಿಸಿದರು.

ADVERTISEMENT

ಮನವಿ ಆಲಿಸಿದ ನವೀನ್ ಚಂದ್ರ, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಘಟಕದ ಉಪಾಧ್ಯಕ್ಷ ಲಕ್ಷ್ಮಣ್, ನಗರ ಘಟಕದ ಅಧ್ಯಕ್ಷ ಪ್ರೇಮ್‌ಕುಮಾರ್, ಕಿರಣ್, ವೆಂಕಟೇಶ್, ಸ್ಟ್ಯಾಲಿನ್, ಶ್ರೀರಾಮ್, ಮುರಳಿ, ನಾಗರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.