ADVERTISEMENT

ಮಾಲೂರು: ಸರ್ಕಾರಿ ಆಸ್ಪತ್ರೆಯಲ್ಲಿ ಡಯಾಲಿಸಸ್ ಯಂತ್ರ ಉದ್ಗಾಟನೆ

ಪತ್ರಿದಿನ 72 ಮಂದಿ ರೋಗಿಗಳಿಗೆ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2025, 7:47 IST
Last Updated 24 ಆಗಸ್ಟ್ 2025, 7:47 IST
ಮಾಲೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಡಯಾಲಿಸಸ್ ಯಂತ್ರಗಳ ಉದ್ಗಾಟನೆಯನ್ನು ಶಾಸಕ ಕೆ.ವೈ.ನಂಜೇಗೌಡ ನೆರವೇರಿಸಿದರು. ನಗರಸಭೆ ಅಧ್ಯಕ್ಷೆ ವಿಜಯಲಕ್ಷ್ಮಿ, ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಶ್ರೀನಿವಾಸ್ ಇದ್ದರು
ಮಾಲೂರು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಡಯಾಲಿಸಸ್ ಯಂತ್ರಗಳ ಉದ್ಗಾಟನೆಯನ್ನು ಶಾಸಕ ಕೆ.ವೈ.ನಂಜೇಗೌಡ ನೆರವೇರಿಸಿದರು. ನಗರಸಭೆ ಅಧ್ಯಕ್ಷೆ ವಿಜಯಲಕ್ಷ್ಮಿ, ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಶ್ರೀನಿವಾಸ್ ಇದ್ದರು   

ಮಾಲೂರು: ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಒಂಬತ್ತು ಡಯಾಲಿಸಸ್ ಯಂತ್ರಗಳನ್ನು ಆಳವಡಿಸಲಾಗಿದೆ. ಪತ್ರಿದಿನ 72 ಮಂದಿ ರೋಗಿಗಳಿಗೆ ಚಿಕಿತ್ಸೆ ನೀಡಲು ಅನುಕೂಲವಾಗಲಿದೆ ಎಂದು ಶಾಸಕ ಕೆ.ವೈ ನಂಜೇಗೌಡ ತಿಳಿಸಿದರು.

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಡಯಾಲಿಸಸ್ ಯಂತ್ರ ಉದ್ಘಾಟಿಸಿ ಮಾತನಾಡಿದರು. ಶ್ರೀಮಂತರರು ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಹೋಗುತ್ತಾರೆ. ಆದರೆ, ಬಡವರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬರುತ್ತಾರೆ. ನಗರದದಲ್ಲಿ ದಿನೆ ದಿನೇ ಡಯಾಲಿಸಿಸ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಬಹಳ ತೊಂದರೆ ಆಗುತ್ತಿತ್ತು. ಈ ಕೊರತೆ ನೀಗಲಿದೆ ಎಂದರು.

ನಗರದಲ್ಲಿ 1962ರಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಆಸ್ಪತ್ರೆ ಕಟ್ಟಡ ಶಿಥಿಲವಾಗಿತ್ತು. ನೂತನ ಕಟ್ಟಡ ನಿರ್ಮಾಣಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೆಚ್ಚಿನ ಆಸಕ್ತಿ ವಹಿಸಿ ಮಾಲೂರಿನಲ್ಲಿ 10 ಎಕರೆ ವಿಸ್ತೀರ್ಣದಲ್ಲಿ ನೂತನ ಆಸ್ಪತ್ರೆ ₹45 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಅನುದಾನ ಬಿಡುಗಡೆ ಮಾಡಿದ್ದಾರೆ. ಅತೀ ಶೀಘ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲು ನಗರಕ್ಕೆ ಬರಲಿದ್ದು, ಅದೇ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆ ನಿರ್ಮಾಣದ ಭೂಮಿ ಪೂಜೆ ಹಮ್ಮಿಕೊಳ್ಳಲಾಗುವುದು ಎಂದರು.

ADVERTISEMENT

ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಶ್ರೀನಿವಾಸ್, ಪುರಸಭೆ ಅಧ್ಯಕ್ಷೆ ವಿಜಯಲಕ್ಷ್ಮಿ, ಉಪಾಧ್ಯಕ್ಷೆ ವಿಜಯಲಕ್ಷ್ಮಿ ಕೃಷ್ಣಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರಾಜಪ್ಪ, ಸದಸ್ಯರಾದ ಮುರಳಿಧರ್‍, ಪದ್ಮಾವತಿ, ಎಂ.ಆರ್‌.ರಂಗಪ್ಪ, ಸುರೇಶ್, ಲಕ್ಷ್ಮಿ, ಆಶ್ರಯ ಸಮಿತಿ ನಿರ್ದೇಶಕ ದಿನೇಶ್ ಗೌಡ, ಕೆಪಿಸಿಸಿ ಸದಸ್ಯ ಅಂಜನಿ ಸೋಮಣ್ಣ, ಕೋಮುಲ್ ನಿದೇರ್ಶಕ ಶ್ರೀನಿವಾಸ್, ತಾಲ್ಲೂಕು ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಮಮೂರ್ತಿ, ಮುಖಂಡ ಹನುಮಂತರೆಡ್ಡಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.