ADVERTISEMENT

ನೇರ ಸಂದರ್ಶನ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 12:50 IST
Last Updated 22 ಏಪ್ರಿಲ್ 2021, 12:50 IST

ಕೋಲಾರ: ‘ಪ್ರಜಾವಾಣಿ’ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ನಿರುದ್ಯೋಗಿ ಪುರುಷರು ಮತ್ತು ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಜಿಲ್ಲಾ ಕೇಂದ್ರದಲ್ಲಿ ಶುಕ್ರವಾರ (ಏ.23) ಹಮ್ಮಿಕೊಂಡಿದ್ದ ನೇರ ಸಂದರ್ಶನವನ್ನು ಕೋವಿಡ್‌ ವಿಷಮ ಸ್ಥಿತಿಯ ಕಾರಣಕ್ಕೆ ಮುಂದೂಡಲಾಗಿದೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನೇರ ಸಂದರ್ಶನ ಮುಂದೂಡಲಾಗಿದೆ. ಸಂದರ್ಶನದ ಬದಲಿ ದಿನಾಂಕವನ್ನು ಮುಂದೆ ತಿಳಿಸಲಾಗುತ್ತದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT