
ಪ್ರಜಾವಾಣಿ ವಾರ್ತೆ
ಕೋಲಾರ: ಮಾಲೂರು ಕೆಐಎಡಿಬಿ ಪ್ರದೇಶ ಕೈಗಾರಿಕಾ ಸಂಘದ ಅಧ್ಯಕ್ಷ ಶ್ರೀಪ್ರಕಾಶ ನೇತೃತ್ವದಲ್ಲಿ ಪದಾಧಿಕಾರಿಗಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಅವರನ್ನು ಈಚೆಗೆ ಭೇಟಿಯಾಗಿ ಕೈಗಾರಿಕಾ ಪ್ರದೇಶದಲ್ಲಿ ನೌಕರರ ಸುರಕ್ಷತೆ ಸೇರಿದಂತೆ ಹಲವು ವಿಚಾರ ಚರ್ಚಿಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಕೇಶವ್ ಕೆ., ಖಜಾಂಚಿ ರಾಮ, ಮಂಡಳಿ ಸದಸ್ಯರಾದ ಚಲಪತಿ, ಸಿದ್ಧಾರ್ಥ ಗುಪ್ತ ಹಾಗೂ ವಿಶಾಲ್ ಮಲ್ಲಿ ಜೊತೆಗಿದ್ದರು.
ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗಾರ್ ಅವರನ್ನು ಭೇಟಿ ಮಾಡಿ ಕೆಐಎಡಿಬಿ 4ನೇ ಹಂತಕ್ಕೆ ಸಂಪರ್ಕಿಸುವ ರಸ್ತೆ ಸಮಸ್ಯೆಯ ಕುರಿತು ಚರ್ಚೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.