ADVERTISEMENT

ಸಕಾಲಕ್ಕೆ ಬಿತ್ತನೆ ಬೀಜ ವಿತರಿಸಿ

​ಪ್ರಜಾವಾಣಿ ವಾರ್ತೆ
Published 21 ಜುಲೈ 2020, 14:01 IST
Last Updated 21 ಜುಲೈ 2020, 14:01 IST
ಕೋಲಾರದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ನಿರ್ಮಲಾ ಮಾತನಾಡಿದರು.
ಕೋಲಾರದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿ.ಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ನಿರ್ಮಲಾ ಮಾತನಾಡಿದರು.   

ಕೋಲಾರ: ‘ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಸಕಾಲಕ್ಕೆ ಗುಣಮಟ್ಟದ ಬಿತ್ತನೆ ಬೀಜ ವಿತರಣೆ ಆಗಬೇಕು’ ಎಂದು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ನಿರ್ಮಲಾ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ಕೊರೊನಾ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ರೈತರಿಗೆ ಕೃಷಿ ನಿರ್ವಹಣೆ ಕಷ್ಟವಾಗಿದೆ. ಆದ ಕಾರಣ ಅಧಿಕಾರಿಗಳು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ಹಾಗೂ ರಸಗೊಬ್ಬರ ವಿತರಿಸಬೇಕು’ ಎಂದು ತಿಳಿಸಿದರು.

‘ಮೀನುಗಾರರಿಗೆ ತರಬೇತಿ ನೀಡಬೇಕು ಹಾಗೂ ಮೀನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಸರ್ಕಾರದಿಂದ ಮೀನುಗಾರರಿಗೆ ಬರುವ ಸೌಲಭ್ಯಗಳನ್ನು ಸಮರ್ಪಕವಾಗಿ ತಲುಪಿಸಬೇಕು’ ಎಂದು ಹೇಳಿದರು.

ADVERTISEMENT

ಜಿ.ಪಂ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಸದಸ್ಯರಾದ ಬಿ.ವಿ.ಮಹೇಶ್, ಬಿ.ಎಂ.ಜಯಪ್ರಕಾಶ್, ಜಿ.ಪಂ ಉಪ ಕಾರ್ಯದರ್ಶಿ ಸಂಜೀವಪ್ಪ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಎಂ.ಗಾಯತ್ರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಉಪ ನಿರ್ದೇಶಕ ರವಿಚಂದ್ರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.