ADVERTISEMENT

ಯಳಗೊಂಡಹಳ್ಳಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 13:20 IST
Last Updated 18 ಜೂನ್ 2025, 13:20 IST
ಮುಳಬಾಗಿಲು ತಾಲ್ಲೂಕಿನ ಯಳಗೊಂಡಹಳ್ಳಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
ಮುಳಬಾಗಿಲು ತಾಲ್ಲೂಕಿನ ಯಳಗೊಂಡಹಳ್ಳಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ   

ಮುಳಬಾಗಿಲು: ತಾಲ್ಲೂಕಿನ ಯಳಗೊಂಡಹಳ್ಳಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಶ್ವ ಯೋಗ ವಿದ್ಯಾ ಟ್ರಸ್ಟ್ ಹಾಗೂ ಋಷಿ ಸಾಧಕ ಸೇವಾ ಟ್ರಸ್ಟ್‌ನಿಂದ 23 ವಿದ್ಯಾರ್ಥಿಗಳಿಗೆ ಬುಧವಾರ ಸೈಕಲ್‌ಗಳನ್ನು ಉಚಿತವಾಗಿ ವಿತರಿಸಲಾಯಿತು. 

ಪ್ರತಿನಿತ್ಯ ವಿವಿಧ ಗ್ರಾಮಗಳ ವಿದ್ಯಾರ್ಥಿಗಳು ನಡೆದುಕೊಂಡೇ ಶಾಲೆಗೆ ಬರುತ್ತಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಉಚಿತವಾಗಿ ಸೈಕಲ್ ವಿತರಣೆ ಮಾಡಿದೆ ಎಂದು ಟ್ರಸ್ಟ್‌ನ ರಾಜೇಶ್ ಗುರೂಜಿ ತಿಳಿಸಿದರು. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳು ಮತ್ತು ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ಸಂಸ್ಕಾರದಿಂದ ಉನ್ನತ ಸಾಧನೆ ಸಾಧ್ಯವಾಗಲಿದೆ ಎಂದರು. 

ಕ್ಷೇತ್ರ ಶಿಕ್ಷಣಾಧಿಕಾರಿ ರಾಮಚಂದ್ರಪ್ಪ, ನಂದಿನಿ ಮಾತಾಜಿ, ಸಾಯಿ ವೇದ, ಶಾಲೆಯ ಮುಖ್ಯ ಶಿಕ್ಷಕ ಮೋಹನ್ ಬಾಬು, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುವರ್ಣ ನಾರಾಯಣಸ್ವಾಮಿ, ಪಿಡಿಒ ರಮೇಶ್, ಎಸ್‌ಡಿಎಂಸಿ ಅಧ್ಯಕ್ಷ ವೆಂಕಟೇಶ್, ಸುರೇಶ್ ಆಚಾರ್ಯ, ವಿಜಯಲಕ್ಷ್ಮಿ, ಅರ್ಚನಾ ಶೆಟ್ಟಿ , ಲಕ್ಷ್ಮಿಪ್ರಿಯ, ಅನಿಲ್ ಕುಮಾರ್, ಜನಾರ್ದನ್, ಎಚ್. ರುಕ್ಮಿಣಿ, ಪ್ರಕಾಶ್, ಪಿ.ಎನ್. ಸುಧಾಕರ್, ಆರ್. ದರ್ಶನ್, ವೆಂಕಟಚಲಮೂರ್ತಿ ಆರ್, ಗೋಪಿನಾಥ್ ಎಸ್.ಪಿ, ಎನ್. ರಂಜಿತ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.