ADVERTISEMENT

ರಕ್ಷಾ ಫಲಾನುಭವಿಗಳಿಗೆ ಚೆಕ್ ವಿತರಣೆ

​ಪ್ರಜಾವಾಣಿ ವಾರ್ತೆ
Published 13 ಮೇ 2022, 2:11 IST
Last Updated 13 ಮೇ 2022, 2:11 IST
ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಗುರುವಾರ ಏರ್ಪಡಿಸಿದ್ದ ಸುಜ್ಞಾನ ನಿಧಿ ವೇತನ ಮಂಜೂರಾತಿ ಪತ್ರ ಹಾಗೂ ರಕ್ಷಾ ಫಲಾನುಭವಿಗಳಿಗೆ ಚೆಕ್ ವಿತರಣಾ ಸಮಾರಂಭವನ್ನು ತಾಲ್ಲೂಕು ದಾಸ ಸಾಹಿತ್ಯ ಪರಿಷತ್‌ ಅಧ್ಯಕ್ಷೆ ಮಾಯಾ ಬಾಲಚಂದ್ರ ಉದ್ಘಾಟಿಸಿದರು
ಶ್ರೀನಿವಾಸಪುರದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಗುರುವಾರ ಏರ್ಪಡಿಸಿದ್ದ ಸುಜ್ಞಾನ ನಿಧಿ ವೇತನ ಮಂಜೂರಾತಿ ಪತ್ರ ಹಾಗೂ ರಕ್ಷಾ ಫಲಾನುಭವಿಗಳಿಗೆ ಚೆಕ್ ವಿತರಣಾ ಸಮಾರಂಭವನ್ನು ತಾಲ್ಲೂಕು ದಾಸ ಸಾಹಿತ್ಯ ಪರಿಷತ್‌ ಅಧ್ಯಕ್ಷೆ ಮಾಯಾ ಬಾಲಚಂದ್ರ ಉದ್ಘಾಟಿಸಿದರು   

ಶ್ರೀನಿವಾಸಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಮಹಿಳೆಯರ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿದೆ. ಯೋಜನೆ ಜಾರಿಯಲ್ಲಿ ಸಾಮಾಜಿಕ ಕಾಳಜಿ ಅಡಗಿದೆ ಎಂದು ತಾಲ್ಲೂಕು ದಾಸ ಸಾಹಿತ್ಯ ಪರಿಷತ್‌ ಅಧ್ಯಕ್ಷೆ ಮಾಯಾ ಬಾಲಚಂದ್ರ ಹೇಳಿದರು.

ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸುಜ್ಞಾನ ನಿಧಿ ವೇತನ ಮಂಜೂರಾತಿ ಪತ್ರ ಹಾಗೂ ರಕ್ಷಾ ಫಲಾನುಭವಿಗಳಿಗೆ ಚೆಕ್ ವಿತರಣಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಯೋಜನೆಯಿಂದ ಆಯೋಜಿಸಲಾಗುತ್ತಿರುವ ಮದ್ಯವರ್ಜನ ಶಿಬಿರಗಳು ಹಾಗೂ ಸಮಾಜ ಸೇವಾ ಚಟುವಟಿಕೆಗಳು ಮಾದರಿಯಾಗಿವೆ ಎಂದು ಅಭಿಪ್ರಾಯಪಟ್ಟರು.

ADVERTISEMENT

ನಮ್ಮ ಊರು ನಮ್ಮ ಕೆರೆ ಯೋಜನೆ ಜಾರಿಯಿಂದ ಕೆರೆಗಳಲ್ಲಿ ಮಳೆ ನೀರು ನಿಲ್ಲುವಂತಾಗಿದೆ. ಇದರಿಂದ ಅಂತರ್ಜಲಮಟ್ಟ ವೃದ್ಧಿಯಾಗುತ್ತಿದೆ. ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆ ನೀಗಿದೆ ಎಂದು
ತಿಳಿಸಿದರು.

ಮಹಿಳಾ ಪರವಾದ ಯೋಜನೆಗಳು ಅವರಲ್ಲಿ ಆತ್ಮವಿಶ್ವಾಸ ತುಂಬುವಲ್ಲಿ ಯಶಸ್ವಿಯಾಗಿವೆ. ಒಟ್ಟಾರೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಗ್ರಾಮೀಣ ಸಮುದಾಯಕ್ಕೆ ವರದಾನವಾಗಿದೆ ಎಂದು
ಹೇಳಿದರು.

ಯೋಜನೆಯ ಜಿಲ್ಲಾ ನಿರ್ದೇಶಕ ಸಿ.ಎಚ್. ಪದ್ಮಯ್ಯ ಮಾತನಾಡಿ, ಸುಜ್ಞಾನ ನಿಧಿ ಶಿಷ್ಯವೇತನ ಯೋಜನೆಯಡಿ 2021-22ನೇ ಸಾಲಿನಡಿ ರಾಜ್ಯದ 19,071 ವಿದ್ಯಾರ್ಥಿಗಳಿಗೆ ₹ 9.93 ಕೋಟಿ ವಿದ್ಯಾರ್ಥಿ ವೇತನ ನೀಡಲಾಗಿದೆ. ಈವರೆಗೆ ಒಟ್ಟು 52,630 ವಿದ್ಯಾರ್ಥಿಗಳಿಗೆ ₹ 61.35 ಕೋಟಿ ಸುಜ್ಞಾನ ನಿಧಿ ಶಿಷ್ಯವೇತನ ನೀಡಲಾಗಿದೆ ಎಂದು ವಿವರಿಸಿದರು.

ತಾಲ್ಲೂಕಿನಲ್ಲಿ 186 ವಿದ್ಯಾರ್ಥಿಗಳಿಗೆ ₹ 10.30 ಲಕ್ಷ ಸುಜ್ಞಾನ ನಿಧಿ ಶಿಷ್ಯವೇತನ ನೀಡಲಾಗುತ್ತಿದೆ. ಪ್ರಗತಿಬಂಧು ಸಂಘದ ಸದಸ್ಯರಿಗೆ 2021-22ನೇ ಸಾಲಿನಲ್ಲಿ ಆರೋಗ್ಯ ವಿಮಾ ಯೋಜನೆಯ ಆರೋಗ್ಯ ರಕ್ಷಾ ಯೋಜನೆಯಡಿ 46 ಸದಸ್ಯರಿಗೆ ₹ 3.88 ಲಕ್ಷ ವಿತರಿಸಲಾಗಿದೆ ಎಂದು ಹೇಳಿದರು.

ಪ್ರಗತಿ ಕೃಷ್ಣ ಬ್ಯಾಂಕ್‌ನ ರೋಣೂರು ಶಾಖೆಯ ಪ್ರಬಂಧಕ ವಿ. ಅಪ್ಪುಸ್ವಾಮಿ, ಸಹಾಯಕ ಪ್ರಬಂಧಕ ರವಿಪ್ರಕಾಶ್ ರೆಡ್ಡಿ, ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಎಸ್. ಸುರೇಶ್ ಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.