ADVERTISEMENT

ಡಿಸಿಸಿ ಬ್ಯಾಂಕ್‌ನಿಂದ ಮಧ್ಯವರ್ತಿ ಹಾವಳಿಗೆ ಕಡಿವಾಣ

​ಪ್ರಜಾವಾಣಿ ವಾರ್ತೆ
Published 12 ಮೇ 2022, 5:01 IST
Last Updated 12 ಮೇ 2022, 5:01 IST
ಮುಳಬಾಗಿಲು ತಾಲ್ಲೂಕಿನ ತಾಯಲೂರು ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಿಸಲಾಯಿತು
ಮುಳಬಾಗಿಲು ತಾಲ್ಲೂಕಿನ ತಾಯಲೂರು ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ವಿತರಿಸಲಾಯಿತು   

ಮುಳಬಾಗಿಲು: ‘ಡಿಸಿಸಿ ಬ್ಯಾಂಕ್ ಮೂಲಕ ಸ್ತ್ರೀಶಕ್ತಿ ಸಂಘಗಳಿಗೆ ನೀಡುವ ಸಾಲ ಸೌಲಭ್ಯದಿಂದ ಮಧ್ಯವರ್ತಿಗಳ ಹಾವಳಿಗೆ ಕಡಿವಾಣ ಬಿದ್ದಿದೆ. ಮಹಿಳೆಯರು ಬಡ್ಡಿರಹಿತ ಸಾಲ ಪಡೆದು ಸ್ವಾವಲಂಬಿಗಳಾಗಲು ಸಾಧ್ಯವಾಗಿದೆ’ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಸಿ. ನೀಲಕಂಠೇಗೌಡ ತಿಳಿಸಿದರು.

ತಾಲ್ಲೂಕಿನ ತಾಯಲೂರು ಗ್ರಾಮದ ವ್ಯವಸಾಯ ಸೇವಾ ಸಹಕಾರ ಸಂಘದಿಂದ ಮಹಿಳಾ ಸ್ವಸಹಾಯ ಸಂಘಗಳಿಗೆ ಶೂನ್ಯಬಡ್ಡಿ ದರದಲ್ಲಿ ಸಾಲ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸ್ತ್ರೀಶಕ್ತಿ ಸಂಘಗಳಿಗೆ ನೀಡುವ ಸಾಲಕ್ಕೆ ಬಡ್ಡಿ ವಿನಾಯಿತಿ ನೀಡುವ ಪದ್ಧತಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲದಲ್ಲಿ ಪ್ರಾರಂಭವಾಯಿತು. ಇಂದಿನ ಮುಖ್ಯಮಂತ್ರಿ ಅದನ್ನು ಮುಂದುವರಿಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದರು.

ADVERTISEMENT

ತಾಯಲೂರು ಸಂಘದ ವ್ಯಾಪ್ತಿಯ 59 ಸಂಘಗಳಿಗೆ ₹ 2.95 ಕೋಟಿ ಸಾಲ ವಿತರಿಸಲಾಯಿತು.ಮುಖಂಡರಾದ ತಾಯಲೂರು ರಮೇಶ್, ಜಿ. ಪಾಪಣ್ಣ, ದೂಲಪಲ್ಲಿ ರಾಮಕೃಷ್ಣಪ್ಪ ಮಾತನಾಡಿದರು.

ಸ್ತ್ರೀಶಕ್ತಿ ಸಂಘಗಳ ಪರವಾಗಿ ಪದ್ಮಮ್ಮ ಅನುಭವ ಹಂಚಿಕೊಂಡರು. ಸಂಘದ ಮಾಜಿ ಅಧ್ಯಕ್ಷ ರಂಗಸ್ವಾಮಿ, ಮಾಜಿ ಅಧ್ಯಕ್ಷ ಶಾಪೂರ್ ಶ್ರೀನಿವಾಸ್, ಎಮ್ಮನತ್ತ ನಾಗರಾಜರೆಡ್ಡಿ, ಎಟಿಎಂ ಭಾಸ್ಕರ್, ಬೈರಸಂದ್ರ ಶಿವಣ್ಣ, ಸಂಘದ ಕಾರ್ಯ ನಿರ್ವಹಣಾಧಿಕಾರಿ ಸರ್ದಾರ್‌, ಗ್ರಾ.ಪಂ. ಅಧ್ಯಕ್ಷೆ ಶೋಭಮ್ಮ, ಸುಬ್ರಮಣಿ, ಪದ್ಮಮ್ಮ, ಶ್ರೀನಿವಾಸ್, ನಾಗರಾಜ್, ರವಿ, ರೋಹಿತ್, ಮಂಜುನಾಥ್, ರಮೇಶ್
ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.