ADVERTISEMENT

ನಾಡಕಚೇರಿಗೆ ಜಿಲ್ಲಾಧಿಕಾರಿ ಭೇಟಿ: ಅಧಿಕಾರಿಗಳಿಗೆ ತರಾಟೆ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 2:15 IST
Last Updated 25 ಸೆಪ್ಟೆಂಬರ್ 2020, 2:15 IST
ಮಾಲೂರು ತಾಲ್ಲೂಕಿನ ಮಾಸ್ತಿ ನಾಡ ಕಚೇರಿಗೆ ಜಿಲ್ಲಾಧಿಕಾರಿ ಸತ್ಯಭಾಮ ಭೇಟಿ ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ವಿ. ಶ್ರೀನಿವಾಸ್ ಇದ್ದರು.
ಮಾಲೂರು ತಾಲ್ಲೂಕಿನ ಮಾಸ್ತಿ ನಾಡ ಕಚೇರಿಗೆ ಜಿಲ್ಲಾಧಿಕಾರಿ ಸತ್ಯಭಾಮ ಭೇಟಿ ನೀಡಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ವಿ. ಶ್ರೀನಿವಾಸ್ ಇದ್ದರು.   

ಮಾಲೂರು: ತಾಲ್ಲೂಕಿನ ಮಾಸ್ತಿ ನಾಡಕಚೇರಿಗೆ ಗುರುವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಸತ್ಯಭಾಮ ಅವರು ಕಡತಗಳನ್ನು ಪರಿಶೀಲಿಸಿ, ದಾಖಲೆಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡದ ಕಂದಾಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಮಾಸ್ಕ್ ಧರಿಸುವಂತೆ ಅರಿವು ಮೂಡಿಸಿದರು. ನಂತರ ಕಡತಗಳನ್ನು ಪರಿಶೀಲಿಸಿದರು.

ಮಾಸ್ತಿ ಹೋಬಳಿ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಕ್ರಮ ಕೈಗೊಳ್ಳದೆ ಇರುವುದಕ್ಕೆ ಕಾರಣ ಕೇಳಿದರು.

ADVERTISEMENT

‘ಮುಂದಿನ ವಾರ ಮತ್ತೆ ಭೇಟಿ ನೀಡುತ್ತೇನೆ. ಸಮರ್ಪಕವಾಗಿ ಕಡತಗಳು ಇರಬೇಕು. ಇಲ್ಲವಾದಲ್ಲಿ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.