ADVERTISEMENT

ಮುಳಬಾಗಿಲು: ಶ್ವಾನದಳ, ಬಾಂಬ್ ನಿಷ್ಕ್ರಿಯ ದಳದ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 13 ಮೇ 2025, 13:59 IST
Last Updated 13 ಮೇ 2025, 13:59 IST
ಕೋಲಾರದ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಮುಳಬಾಗಿಲು ನಗರದ ಬಸ್ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದರು
ಕೋಲಾರದ ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಮುಳಬಾಗಿಲು ನಗರದ ಬಸ್ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದರು   

ಮುಳಬಾಗಿಲು: ಇತ್ತೀಚೆಗೆ ಪಾಕಿಸ್ತಾನದ ಗಡಿಯಲ್ಲಿ ನಡೆಯುತ್ತಿರುವ ಸಂಘರ್ಷಗಳಿಂದ ಮುನ್ನೆಚ್ಚರಿಕೆ ಕ್ರಮಗಳಿಗಾಗಿ ಕೋಲಾರ ಜಿಲ್ಲಾ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ಮುಳಬಾಗಿಲು ನಗರದಲ್ಲಿ ತಪಾಸಣೆ ನಡೆಸಿ, ಜನನಿಬಿಡ ಪ್ರದೇಶಗಳನ್ನು ಪರಿಶೀಲಿಸಲಾಯಿತು.

ನಗರದ ಬಸ್ ನಿಲ್ದಾಣ, ಕೆಇಬಿ ವೃತ್ತ, ಆಸ್ಪತ್ರೆ ಮತ್ತಿತರ ಸ್ಥಳಗಳಲ್ಲಿ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಪರಿಶೀಲನೆ ನಡೆಸಿದರು. ಶ್ವಾನದಳದಿಂದ ಪ್ರಯಾಣಿಕರ ಲಗೇಜುಗಳು, ಚೇರು, ಬೆಂಚು, ಮೆಟ್ಟಿಲುಗಳ ಸಂಧಿಗಳನ್ನೆಲ್ಲಾ ತಪಾಸಣೆ ನಡೆಸಲಾಯಿತು.

ಕೋಲಾರದಿಂದ ಬಂದಿದ್ದ ಪರಿಶೀಲನಾ ತಂಡದ ಅಧಿಕಾರಿಗಳು ಹಾಗೂ ಸಿಬ್ಬಂದಿ ಮುಳಬಾಗಿಲು ನಗರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಜನ ಹೆಚ್ಚಾಗಿ ಸೇರುವ ಸ್ಥಳಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಹಾಗೂ ಪ್ರಯಾಣಿಕರಿಗೆ ಜಾಗೃತಿ ಮೂಡಿಸಿದರು.

ADVERTISEMENT

ಇತ್ತೀಚಿಗೆ ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಅನುಚಿತವಾಗಿ ವರ್ತನೆ ತೋರುತ್ತಿದ್ದಾರೆ. ದೇಶದ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಪ್ರಕಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾಜದ ಶಾಂತಿ ಕದಡಬಹುದಾದ ಚಟುವಟಿಕೆಗಳನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಪರಿಶೀಲನಾ ಕಾರ್ಯ ಕೂಗೊಳ್ಳಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.