ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)
ಮುಳಬಾಗಿಲು: ತಾಲ್ಲೂಕಿನ ಕನ್ನಸಂದ್ರ ಗ್ರಾಮದಲ್ಲಿ ಮಹಿಳೆಯೊಬ್ಬರು ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಕ್ಷಿತಾ (23) ಆತ್ಮಹತ್ಯೆಗೆ ಶರಣಾದ ಮಹಿಳೆ.
ತಾಲ್ಲೂಕಿನ ಖಾದ್ರಿಪುರ ಗ್ರಾಮದ ಮೃತ ಅಕ್ಷಿತಾ ಹಾಗೂ ಕನ್ನಸಂದ್ರ ಗ್ರಾಮದ ವಿನಾಯಕ ಪ್ರೀತಿಸಿ, ಮೂರು ವರ್ಷದ ಹಿಂದೆ ಮದುವೆಯಾಗಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಅಕ್ಷಿತಾ ಅವರಿಗೆ ಗಂಡ ಮತ್ತು ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು. ಕಿರುಕುಳ ತಾಳಲಾರದೆ, ಬೇಸತ್ತು ಅಕ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತಳ ಸಂಬಂಧಿಕರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ವಿನಾಯಕ ಮತ್ತು ಆತನ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಬ್‌ಇನ್‌ಸ್ಪೆಕ್ಟರ್ ಅರುಣ್ ಗೌಡ ಪಾಟೀಲ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.