ADVERTISEMENT

ಕರಡು ಮತದಾರರ ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 14:16 IST
Last Updated 17 ಏಪ್ರಿಲ್ 2021, 14:16 IST

ಕೋಲಾರ: ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಸಾರ್ವತ್ರಿಕ ಚುನಾವಣೆ–2021ರ ಸಂಬಂಧ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಛೇರಿ, ಜಿ.ಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿ ಕಚೇರಿ, ತಾಲ್ಲೂಕು ಪಂಚಾಯಿತಿ ಕಚೇರಿಗಳು ಹಾಗೂ ತಾಲ್ಲೂಕು ಕಚೇರಿಗಳಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮತದಾರರ ಹೆಸರು ವಾಸವಿರುವ ಕ್ಷೇತ್ರದ ವ್ಯಾಪ್ತಿಯಲ್ಲಿ ಇರದೆ ಬೇರೆ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿದ್ದರೆ ಆ ಬಗ್ಗೆ ಗ್ರಾಮೀಣ ಪ್ರದೇಶದ ಮತದಾರರು ಆಕ್ಷೇಪಣೆ ಸಲ್ಲಿಸಬಹುದು. ನಗರ ಪ್ರದೇಶದ ಮತದಾರರ ಹೆಸರನ್ನು ಅಥವಾ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದ ಹೆಸರುಗಳನ್ನು ಜಿ.ಪಂ ಮತ್ತು ತಾ.ಪಂಗೆ ಸಿದ್ಧಪಡಿಸಿರುವ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿದ್ದರೆ ಮಾತ್ರ ಆಕ್ಷೇಪಣೆ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ADVERTISEMENT

ಆಕ್ಷೇಪಣೆ ಸಲ್ಲಿಕೆಗೆ ಏ.22 ಕಡೆಯ ದಿನ. ಕರಡು ಮತದಾರರ ಪಟ್ಟಿ ಸಂಬಂಧ ಆಕ್ಷೇಪಣೆಯಿದ್ದರೆ ಸಂಬಂಧಪಟ್ಟ ತಹಶೀಲ್ದಾರ್‌ಗಳಿಗೆ ನಿಗದಿತ ಅವಧಿಯಲ್ಲಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.