ADVERTISEMENT

ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಒತ್ತು

​ಪ್ರಜಾವಾಣಿ ವಾರ್ತೆ
Published 30 ಮೇ 2022, 4:36 IST
Last Updated 30 ಮೇ 2022, 4:36 IST
ಮುಳಬಾಗಿಲು ತಾಲ್ಲೂಕಿನ ದೇವರಾಯಸಮುದ್ರ ಗ್ರಾ.ಪಂ. ಅಧ್ಯಕ್ಷ ಎಂ.ವಿ. ಶ್ರೀನಿವಾಸ್ ಅವರು ದೊಡ್ಡಿಗಾನಹಳ್ಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು
ಮುಳಬಾಗಿಲು ತಾಲ್ಲೂಕಿನ ದೇವರಾಯಸಮುದ್ರ ಗ್ರಾ.ಪಂ. ಅಧ್ಯಕ್ಷ ಎಂ.ವಿ. ಶ್ರೀನಿವಾಸ್ ಅವರು ದೊಡ್ಡಿಗಾನಹಳ್ಳಿಗೆ ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು   

ಮುಳಬಾಗಿಲು: ತಾಲ್ಲೂಕಿನ ದೇವರಾಯಸಮುದ್ರ ಗ್ರಾ.ಪಂ. ಅಧ್ಯಕ್ಷ ಎಂ.ವಿ. ಶ್ರೀನಿವಾಸ್ ಅವರು ದೊಡ್ಡಿಗಾನಹಳ್ಳಿಗೆ ಭೇಟಿ ನೀಡಿ ಪರಿಶೀಲಿಸಿದರು.

18 ಗ್ರಾಮಗಳಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮವಹಿಸಲಾಗುವುದು. ಈಗಾಗಲೇ, ಅವಶ್ಯಕತೆ ಇರುವ ಕೊಳವೆಬಾವಿಗಳಿಗೆ ಹೊಸ ಪಂಪ್, ಮೋಟಾರ್ ಅಳವಡಿಸಿದ್ದೇವೆ ಎಂದು ಹೇಳಿದರು.

ಕಮ್ಮದಟ್ಟಿ ಕಾಮನೂರು ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವ ಇರುವುದರಿಂದ ಕೂಡಲೇ ರಿಬೋರ್ ಮಾಡಿಸಿ ಕುಡಿಯುವ ನೀರು ಪೂರೈಕೆಗೆ ಕ್ರಮವಹಿಸಲಾಗುವುದು ಎಂದರು.

ADVERTISEMENT

ಪಿಡಿಒ ವಿ. ಶ್ರೀನಿವಾಸ್ ಮಾತನಾಡಿ, ‘ಗ್ರಾಮಸ್ಥರು ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತಂದರೆ ಪರಿಹರಿಸಲು ಕ್ರಮವಹಿಸಲಾಗುವುದು’ ಎಂದು ತಿಳಿಸಿದರು.

ಸದಸ್ಯರಾದ ಜಮ್ಮನಹಳ್ಳಿ ಕೃಷ್ಣಪ್ಪ, ದೊಡ್ಡಿಗಾನಹಳ್ಳಿ ಕೃಷ್ಣಪ್ಪ, ಸಿಬ್ಬಂದಿಯಾದ ಡಿ.ಎಂ. ವೆಂಕಟೇಶ್, ಶ್ರೀರಾಮ್, ಮುಖಂಡ ಮಂಜುನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.