ADVERTISEMENT

ಪೊಲೀಸ್‌ ಕ್ರೀಡಾಕೂಟಕ್ಕೆ ಚಾಲನೆ

ಉತ್ತಮ ಕಾರ್ಯ ನಿರ್ವಹಣೆಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2022, 6:06 IST
Last Updated 17 ನವೆಂಬರ್ 2022, 6:06 IST
ಕೆಜಿಎಫ್ ನಗರದ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಚಾಲನೆ ನೀಡಿದರು
ಕೆಜಿಎಫ್ ನಗರದ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಚಾಲನೆ ನೀಡಿದರು   

ಕೆಜಿಎಫ್: ‘ಸರ್ಕಾರಿ ಇಲಾಖೆಯ ಅಧಿಕಾರಿಗಳು ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಇತರರಿಗೆ ಮಾದರಿಯಾಗಬೇಕು’ ಎಂದು ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಹೇಳಿದರು.

ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೆಜಿಎಫ್ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಇಲಾಖೆಯಲ್ಲಿ ಉತ್ತಮ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಎಲ್ಲರ ಜೊತೆಯಲ್ಲಿ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳಬೇಕು ಎಂದರು.

ADVERTISEMENT

ಯಾವುದೇ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ. ಕ್ರೀಡಾಕೂಟದಲ್ಲಿ ಎಲ್ಲರಿಗೂ ಬಹುಮಾನ ದೊರೆಯುವುದಿಲ್ಲ. ಮುಂದಿನ ದಿನಗಳಲ್ಲಿ ಬಹುಮಾನ ದೊರೆಯುವ ರೀತಿಯಲ್ಲಿ ಸಾಧನೆ ಮಾಡಬೇಕು ಎಂದು ನುಡಿದರು.

ಕೆಜಿಎಫ್ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರಣಿದೇವಿ ಮಾಲಗತ್ತಿ ಮಾತನಾಡಿ, ಕ್ರೀಡೆಗಳಲ್ಲಿ ಮೇಲು, ಕೀಳು ಎಂಬುದು ಬೇಡ. ಎಲ್ಲರೂ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದರು.

ಕ್ರೀಡೆಯಲ್ಲಿ ಇಂದು ಸೋತವರು ಮುಂದಿನ ದಿನಗಳಲ್ಲಿ ಜಯಗಳಿಸಿ ಬಹುಮಾನ ಪಡೆಯುತ್ತಿದ್ದಾರೆ. ಆದ್ದರಿಂದ ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಪ್ರೊಬೆಷನ್‌ ಜಿಲ್ಲಾಧಿಕಾರಿ ವಿನಾಯಕ್ ನರೋಡೆ, ಡಿವೈಎಸ್‌ಪಿ ರಮೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.