ಕೆಜಿಎಫ್: ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿ ಉರುಳಿ ಬಿದ್ದ ಘಟನೆ ಬುಧವಾರ ಬೆಮಲ್ ನಗರದಲ್ಲಿ ನಡೆದಿದೆ.
ಘಟನೆಯಲ್ಲಿ ಬೆಂಗಳೂರು ಮೂಲದ ಕಾರು ಚಾಲಕ ಪ್ರಶಾಂತ್ ಗಾಯಗೊಂಡು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು. ತಮಿಳುನಾಡಿನಲ್ಲಿ ಸಂಬಂಧಿಕರನ್ನು ನೋಡಿಕೊಂಡು ಬರುತ್ತಿದ್ದ ಪ್ರಶಾಂತ್ ಬೆಮಲ್ ವಿಶ್ವೇಶ್ವರಯ್ಯ ಕಮಾನಿನ ಬಳಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಕಾರು ಉರುಳಿ ಬಿದ್ದಿತು. ಬೆಮಲ್ ನಗರ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.