ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ಭಕ್ತರ ಸರತಿ ಸಾಲು
ಮಾಲೂರು: ಆಷಾಡ ಮಾಸದ ಏಕಾದಶಿ ಅಂಗವಾಗಿ ತಾಲ್ಲೂಕಿನ ಯಾತ್ರಾ ಸ್ಥಳ ಚಿಕ್ಕತಿರುಪತಿ ಪ್ರಸನ್ನ ವೆಂಕಟರಮಣ ಸ್ವಾಮಿ ದೇವಾಲಯಕ್ಕೆ ಭಾನುವಾರ ಭಕ್ತ ಸಾಗರವೇ ಹರಿದು ಬಂದು, ಸ್ವಾಮಿಯ ದರ್ಶನ ಪಡೆಯಿತು.
ದೇಗುಲದಲ್ಲಿ ಬೆಳಗ್ಗೆಯಿಂದಲೂ ಭಕ್ತರು ಹೆಚ್ಚಿನ ಪ್ರಮಾಣದಲ್ಲಿ ಆಗಮಿಸಿ ಸ್ವಾಮಿಯ ದರ್ಶನ ಪಡೆದರು. ದೇವಾಲಯದ ಒಳಾಂಗಣದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಕ್ತರು ದೇವಾಲಯದ ಹೊರಗಿನ ಆವರಣದ ವರೆಗೂ ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಸುಮಾರು 5 ಸಾವಿರಕ್ಕೂ ಹೆಚ್ಚು ಭಕ್ತರು ದೇವರ ದರ್ಶನ ಪಡೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.