ADVERTISEMENT

ಕನ್ನಡ ಭಾಷೆ ಉಳಿವಿಗೆ ಒತ್ತು

ಕರವೇಯಿಂದ ಗಡಿನಾಡ ಕನ್ನಡ ಜಾಗೃತಿ ಸಮಾವೇಶ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2021, 5:44 IST
Last Updated 27 ಸೆಪ್ಟೆಂಬರ್ 2021, 5:44 IST
ಮಾಲೂರು ಪಟ್ಟಣದ ಅರಳೇರಿ ರಸ್ತೆಯ ಕುವೆಂಪು ಉದ್ಯಾನದ ಬಳಿ ಭಾನುವಾರ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ಯ ತಾಲ್ಲೂಕು ಘಟಕದಿಂದ ಭಾನುವಾರ ಹಮ್ಮಿಕೊಂಡಿದ್ದ ಗಡಿನಾಡ ಕನ್ನಡ ಜಾಗೃತಿ ಸಮಾವೇಶದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಶಾಸಕ ಕೆ.ವೈ. ನಂಜೇಗೌಡ, ಪ್ರವೀಣ್ ಶೆಟ್ಟಿ, ಜಿ.ಇ. ರಾಮೇಗೌಡ, ರಾಮೇಗೌಡ, ಅನೇಕಲ್ ಪುನೀತ್, ಸ್ವಾಮಿ, ಮುರಳೀಧರ್, ಚಂಬೆ ರಾಜೇಶ್ ಹಾಜರಿದ್ದರು
ಮಾಲೂರು ಪಟ್ಟಣದ ಅರಳೇರಿ ರಸ್ತೆಯ ಕುವೆಂಪು ಉದ್ಯಾನದ ಬಳಿ ಭಾನುವಾರ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ)ಯ ತಾಲ್ಲೂಕು ಘಟಕದಿಂದ ಭಾನುವಾರ ಹಮ್ಮಿಕೊಂಡಿದ್ದ ಗಡಿನಾಡ ಕನ್ನಡ ಜಾಗೃತಿ ಸಮಾವೇಶದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಶಾಸಕ ಕೆ.ವೈ. ನಂಜೇಗೌಡ, ಪ್ರವೀಣ್ ಶೆಟ್ಟಿ, ಜಿ.ಇ. ರಾಮೇಗೌಡ, ರಾಮೇಗೌಡ, ಅನೇಕಲ್ ಪುನೀತ್, ಸ್ವಾಮಿ, ಮುರಳೀಧರ್, ಚಂಬೆ ರಾಜೇಶ್ ಹಾಜರಿದ್ದರು   

ಮಾಲೂರು: ‘ಗಡಿ ಭಾಗವಾದ ಮಾಲೂರು ಪಟ್ಟಣದಲ್ಲಿ ಕನ್ನಡಪರ ಸಂಘಟನೆಗಳ ಹೋರಾಟದಿಂದ ಕನ್ನಡ ಉಳಿಯಲು ಸಾಧ್ಯವಾಗಿದೆ’ ಎಂದು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದರು.

ಪಟ್ಟಣದ ಅರಳೇರಿ ರಸ್ತೆಯ ಕುವೆಂಪು ಉದ್ಯಾನದ ಬಳಿ ಭಾನುವಾರ ಕರ್ನಾಟಕ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ)ಯ ತಾಲ್ಲೂಕು ಘಟಕದಿಂದ ಭಾನುವಾರ ಹಮ್ಮಿಕೊಂಡಿದ್ದ ಗಡಿನಾಡ ಕನ್ನಡ ಜಾಗೃತಿ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಇಲ್ಲಿನ ಕನ್ನಡ ಪರ ಸಂಘಟನೆಗಳು ವರ್ಷಕ್ಕೊಮ್ಮೆ ರಾಜ್ಯೋತ್ಸವ ಆಚರಣೆ ಮಾಡುವುದಕ್ಕೆ ಸೀಮಿತವಾಗಿಲ್ಲ. ಪ್ರತಿದಿನ ಕನ್ನಡ ಭಾಷೆಯ ಅಭಿವೃದ್ಧಿಗೆ ದುಡಿಯುವ ಮೂಲಕ ಪಕ್ಕದ ತಮಿಳುನಾಡಿನ ಹೊಸೂರು ಮತ್ತು ಕೃಷ್ಣಗಿರಿ ತನಕ ಕನ್ನಡ ಭಾಷೆಯನ್ನು ಕೊಂಡೊಯ್ಯುವ ಕೆಲಸ ಮಾಡಿವೆ ಎಂದರು.

ADVERTISEMENT

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆ.ಸಿ. ವ್ಯಾಲಿ ಯೊಜನೆಯಡಿ ₹ 1,300 ಕೋಟಿ ವೆಚ್ಚದಲ್ಲಿ ಕೆರೆಗಳಿಗೆ ನೀರು ಹರಿಸುವ ಯೋಜನೆ ಜಾರಿಗೆ ತಂದರು. ಇದರಿಂದ ತಾಲ್ಲೂಕಿನ ಕೆರೆಗಳಿಗೆ ನೀರು ಹರಿಸುತ್ತಿರುವುದರಿಂದ ಅಂತರ್ಜಲ ಮಟ್ಟ ವೃದ್ಧಿಯಾಗಿದೆ. ಕೊಳವೆಬಾವಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಇದರಿಂದ ಕುಡಿಯುವ ನೀರಿನ ಹಾಹಾಕಾರ ತಾಲ್ಲೂಕಿನಲ್ಲಿ ಕಡಿಮೆಯಾಗಿದೆ ಎಂದು ತಿಳಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಅಧ್ಯಕ್ಷತೆವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು.

ಜೆಡಿಎಸ್ ಮುಖಂಡ ಜಿ.ಇ. ರಾಮೇಗೌಡ, ಕನ್ನಡ ಜನಶಕ್ತಿ ರಾಜ್ಯ ಘಟಕದ ಅಧ್ಯಕ್ಷ ರಾಮೇಗೌಡ, ಉಪಾಧ್ಯಕ್ಷ ಅನೇಕಲ್ ಪುನೀತ್, ಸಂಘಟನಾ ಕಾರ್ಯದರ್ಶಿ ಕಲಾವಿದ ಸ್ವಾಮಿ, ಪುರಸಭೆ ಅಧ್ಯಕ್ಷ ಮುರಳೀಧರ್, ಕರವೇ ಜಿಲ್ಲಾ ಅಧ್ಯಕ್ಷ ಚಂಬೆ ರಾಜೇಶ್, ಪ್ರಾಧಿಕಾರದ ಅಧ್ಯಕ್ಷ ಸತೀಶ್ ಆರಾಧ್ಯ, ಸ್ಥಾಯಿಸಮಿತಿ ಅಧ್ಯಕ್ಷ ಪರಮೇಶ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮುನೇಗೌಡ, ವಕೀಲ ಡಿ. ನಾರಾಯಣಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.