ADVERTISEMENT

ಗುಣಮಟ್ಟದ ಹಾಲು ಪೂರೈಕೆಗೆ ಒತ್ತು ನೀಡಿ: ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ಸಲಹೆ

​ಪ್ರಜಾವಾಣಿ ವಾರ್ತೆ
Published 23 ಜನವರಿ 2020, 12:31 IST
Last Updated 23 ಜನವರಿ 2020, 12:31 IST
ಕೋಲಾರ ತಾಲ್ಲೂಕಿನ ಅರಿನಾಗನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಿಂದ ನೂತನವಾಗಿ ನಿರ್ಮಿಸಿರುವ ಅಮೃತ್ ಮಹಲ್ ಭವನವನ್ನು ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ಉದ್ಘಾಟಿಸಿದರು.
ಕೋಲಾರ ತಾಲ್ಲೂಕಿನ ಅರಿನಾಗನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಿಂದ ನೂತನವಾಗಿ ನಿರ್ಮಿಸಿರುವ ಅಮೃತ್ ಮಹಲ್ ಭವನವನ್ನು ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ಉದ್ಘಾಟಿಸಿದರು.   

ಕೋಲಾರ: ‘ಹಾಲು ಉತ್ಪಾದಕರ ಸಹಕಾರ ಸಂಘಗಳು ಹಾಲಿನ ಗುಣಮಟ್ಟ ಕಾಪಾಡಿದಾಗ ಮಾತ್ರ ಆರ್ಥಿಕವಾಗಿ ಸಬಲರಾಗಲು ಸಹಕಾರಿ’ ಎಂದು ಕೋಚಿಮುಲ್ ನಿರ್ದೇಶಕ ಡಿ.ವಿ.ಹರೀಶ್ ತಿಳಿಸಿದರು.

ತಾಲ್ಲೂಕಿನ ಅರಿನಾಗನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದಿಂದ ನೂತನವಾಗಿ ನಿರ್ಮಿಸಿರುವ ಅಮೃತ್ ಮಹಲ್ ಭವನ ಉದ್ಘಾಟಿಸಿ ಮಾತನಾಡಿ, ‘ರೈತರು ಹಸುಗಳ ಆರೋಗ್ಯ ತಪಾಸಣೆ ಮಾಡಿಸಬೇಕು. ಏನಾದರು ಕಾಯಿಲೆಯ ಲಕ್ಷಣ ಕಂಡು ಬಂದರೆ ಚಿಕಿತ್ಸೆ ಕೊಡಿಸಿದರೆ ಹಾಲಿನ ಇಳುವರಿ ಜತೆಗೆ, ಗುಣಮಟ್ಟವೂ ಉತ್ತಮವಾಗಿರುತ್ತದೆ’ ಎಂದು ಹೇಳಿದರು.

‘ಇತ್ತೀಚಿಗೆ ಸಂಘಗಗಳು ಗಳಿಸುವ ಲಾಭದಿಂದ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡುತ್ತಿದ್ದಾರೆ. ಇದರ ಬದಲು ಆರ್ಥಿಕವಾಗಿ ಹಿಂದುಳಿದಿರುವ ಬಡವರು ಹಸು ಖರೀದಿ ಮಾಡಲು ಶೂನ್ಯಬಡ್ಡಿ ದರದಲ್ಲಿ ಸಾಲ ನೀಡಿ. ಇದರಿಂದ ಒಕ್ಕೂಟಕ್ಕು ಲಾಭ ದೊರೆಯುತ್ತದೆ’ ಎಂದು ತಿಳಿಸಿದರು.

ADVERTISEMENT

‘ನೂತನ ಕಟ್ಟಡ ನಿರ್ಮಾಣಕ್ಕೆ ಒಕ್ಕೂಟದಿಂದ ₨ ೩ ಲಕ್ಷ ಸಹಾಯ ಧನ ನೀಡಿದ್ದು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₨ ೧ ಲಕ್ಷ ಮಂಜೂರು ಮಾಡಿಸಲು ಶಿಫಾರಸ್ಸು ಮಾಡುತ್ತೆನೆ. ಸಂಘದಲ್ಲಿ ಪಾರದರ್ಶಕ ಆಡಳಿತ ಸೇವೆ ಕಲ್ಪಿಸಲು ಮುಂದಾಗಿ’ ಎಂದು ಸಲಹೆ ನೀಡಿದರು.

‘ರೈತರನ್ನು ಸಂಕಷ್ಟದಿಂದ ಪಾರು ಮಾಡುವ ಉದ್ದೇಶದಿಂದ ಕೋಮುಲ್ ವಿಮಾ ಯೋಜನೆ ಜಾರಿಗೆ ತಂದಿದೆ. ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರಗಳು ಸೇರಿದಂತೆ ವಿವಿಧ ಸೌರ್ಯಗಳ ಪ್ರಯೋಜನೆ ಪಡೆದುಕೊಳ್ಳಬೇಳು’ ಎಂದು ತಿಳಿಸಿದರು.

ಒಕ್ಕೂಟದ ಉಪ ವ್ಯವಸ್ಥಾಪಕ ಡಾ.ಎ.ಸಿ.ಶ್ರೀನಿವಾಸಗೌಡ ಮಾತನಾಡಿ, ‘ಹಾಲಿ ಗುಣಮಟ್ಟದ ಆಧಾರದ ಮೇರೆಗೆ ದರ ನಿಗಧಿ ಮಾಡಲಾಗುವುದು. ಇದರಿಂದ ರೈತರು ಗುಣಮಟ್ಟದ ಹಾಲು ಉತ್ಪಾದನೆಗೆ ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.

‘ಒಕ್ಕೂಟದಿಂದ ಸಿಗುವ ಯೋಜನೆಗಳನ್ನು ಸಮರ್ಪಕವಾಗಿ ಉತ್ಪಾದಕರು ಸದುಪಯೋಗ ಪಡಿಸಿಕೋಳ್ಳಬೇಕು. ರಾಸುಗಳ ಸಾಕಾಣಿಕೆ ಬಗ್ಗೆ ಕಾಳಜಿವಹಿಸಬೇಖು. ಪಶು ಆಹಾರ, ಖನಿಜ ಮಿಶ್ರಣ, ಜಂತು ಹುಳ ಔಷದಿಗಳನ್ನು ಸಮರ್ಪಕವಾಗಿ ನೀಡುವ ಮೂಲಕ ಹಸುವಿನ ಆರೋಗ್ಯ ಕಾಪಾಡಬೇಕು’ ಎಂದು ಹೇಳಿದರು.

ಒಕ್ಕೂಟದ ವಿಸ್ತಾರಣಾಧಿಕಾರಿಗಳಾದ ಎಚ್.ಎಸ್.ನಾಗೇಂದ್ರ, ಅಣ್ಣಪ್ಪ ತಡಕೋಡ್, ಭರತ್‌ಕುಮಾರ್, ಸಂಘದ ಕಾರ್ಯದರ್ಶಿ ಎನ್.ರಾಮರೆಡ್ಡಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.