ADVERTISEMENT

ಕೆಜಿಎಫ್‌: ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 23:16 IST
Last Updated 17 ಜುಲೈ 2025, 23:16 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಕೆಜಿಎಫ್‌: ನಗರದ ಡಾ.ಟಿ.ತಿಮ್ಮಯ್ಯ ಎಂಜಿನಿಯರಿಂಗ್‌ ಕಾಲೇಜಿನ ಹಾಸ್ಟೆಲ್‌ ಕೋಣೆಯೊಳಗೆ ಪ್ರಥಮ ಸೆಮಿಸ್ಟರ್‌ ವಿದ್ಯಾರ್ಥಿಯೊಬ್ಬ ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ADVERTISEMENT

ಮೃತನನ್ನು ಬಳ್ಳಾರಿ ಮೂಲದ ಗಣೇಶ್‌ (19) ಎಂದು ಗುರುತಿಸಲಾಗಿದೆ. ತಿಮ್ಮಯ್ಯ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಪ್ರಥಮ ವರ್ಷದ ಮೈನಿಂಗ್‌ ಕೋರ್ಸ್‌ ಮಾಡುತ್ತಿದ್ದ. ಕೊಠಡಿಯಲ್ಲಿ ಸಹಪಾಠಿಗಳು ಇಲ್ಲದ ಸಂದರ್ಭದಲ್ಲಿ ನೇಣು ಹಾಕಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.