
ಮಾಲೂರು: ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶೀಘ್ರ ಎತ್ತಿನಹೊಳೆ ನೀರು ಹರಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ವಿವಿಧ ಕನ್ನಡ ಪರ ಮತ್ತು ರೈತ ಸಂಘಟನೆಗಳು ಡಿ.15ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರವೀಣ್ ಶೆಟ್ಟಿ ಬಣದ ಕರವೇ ಜಿಲ್ಲಾಧ್ಯಕ್ಷ ಚಂಬೆ ರಾಜೇಶ್ ತಿಳಿಸಿದರು.
ನಗರದ ಕನ್ನಡ ಸಾಹಿತ್ಯ ಪರಿಷತ್ ಕಚೇರಿಯಲ್ಲಿ ಸೋಮವಾರ ವಿವಿಧ ಕನ್ನಡ ಪರ ಮತ್ತು ರೈತ ಸಂಘಟನೆ ವತಿಯಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಳಿ ಜಿಲ್ಲೆಗಳಿಗೆ ಎತ್ತಿನಹೊಳೆ ನೀರು ಸರಬರಾಜು ಮಾಡಬೇಕು. ಸರ್ಕಾರ ಕಾಮಗಾರಿ ನಡೆಸುತ್ತಿರುವ ಜಾಗದಲ್ಲಿ ಒತ್ತುವರಿಯಾಗಿರುವ ರೈತರಿಗೆ ಪರಿಹಾರ ನೀಡಬೇಕು. ಮಂದ ಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಗೆ ವೇಗ ನೀಡಬೇಕು. ಕೇಂದ್ರ ಸರ್ಕಾರ ಕೃಷ್ಣಾ ನದಿ ಜೋಡಣೆ ಮಾಡಿ ಕೋಲಾರ ಜಿಲ್ಲೆಗೆ ನೀರು ಹರಿಸಬೇಕು. ಕೆ.ಸಿ.ವ್ಯಾಲಿ ನೀರನ್ನು ಮೂರು ಹಂತದಲ್ಲಿ ಶುದ್ಧೀಕರಣ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ 15ರಂದು ಬೆಳಗ್ಗೆ 11ಕ್ಕೆ ಬಾಲಾಜಿ ವೃತ್ತದಿಂದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.
ತಾಲೂಕು ಅಧ್ಯಕ್ಷ ದೊಡ್ಡ ಶಿವಾರ ನಾರಾಯಣಸ್ವಾಮಿ, ಎಸ್.ಎಂ.ರಾಜು, ಶ್ರೀನಿವಾಸ್, ಪ್ರಸನ್ನ ಕುಮಾರ್ ರೆಡ್ಡಿ, ಬಾಲಚಂದ್ರ, ಮುನಿಶಾಮಿ ಗೌಡ, ದಯಾನಂದ, ತಿಪ್ಪಸಂದ್ರ ಹರೀಶ್, ರವಿಚಂದ್ರ ಶೆಟ್ಟಿ, ವೆಂಕಟೇಶಪ್ಪ, ಮುಕೇಶ್ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.