ADVERTISEMENT

ಧೂಮಪಾನದಿಂದ ಕಣ್ಣಿಗೆ ಹಾನಿ

ವಿಶ್ವ ದೃಷ್ಟಿ ದಿನ ಕಾರ್ಯಕ್ರಮದಲ್ಲಿ ವೈದ್ಯರ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2022, 6:06 IST
Last Updated 14 ಅಕ್ಟೋಬರ್ 2022, 6:06 IST
ಕೋಲಾರದಲ್ಲಿ ಗುರುವಾರ ವಿಶ್ವ ದೃಷ್ಟಿ ದಿನ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಚಾಲನೆ ನೀಡಿದರು
ಕೋಲಾರದಲ್ಲಿ ಗುರುವಾರ ವಿಶ್ವ ದೃಷ್ಟಿ ದಿನ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಚಾಲನೆ ನೀಡಿದರು   

ಕೋಲಾರ: ‘ಧೂಮಪಾನದಿಂದ ಕಣ್ಣಿನ ಪೊರೆ, ಅಕ್ಷಿಪಟಲ ಹಾನಿ ಮತ್ತು ದೃಷ್ಟಿದೋಷ ಉಂಟಾಗುತ್ತದೆ. ಕಣ್ಣಿನ ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ ಆಹಾರ, ಹಸಿರು ತರಕಾರಿ, ಹಳದಿ ಮತ್ತು ಕೆಂಪು ಹಣ್ಣು ಹೆಚ್ಚಾಗಿ ಸೇವಿಸಬೇಕು’ ಎಂದು ಜಿಲ್ಲಾ ಅಂಧತ್ವಾಧಿಕಾರಿ ಡಾ.ಎನ್.ಸಿ. ನಾರಾಯಣಸ್ವಾಮಿ ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಆವರಣದಲ್ಲಿಗುರುವಾರಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ 23ನೇ ವಿಶ್ವ ದೃಷ್ಟಿ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕಣ್ಣು ಮಾನವನ ಅಂಗಾಂಗಗಳಲ್ಲಿ ಪ್ರಮುಖವಾಗಿದ್ದು, ಪಂಚೇಂದ್ರಿಯಗಳಲ್ಲಿ ಶ್ರೇಷ್ಠವಾದ ಅಂಗ. ಕಣ್ಣಿನ ರಕ್ಷಣೆಗೆ ಪ್ರತಿಯೊಬ್ಬರು ಆದ್ಯತೆ ನೀಡಬೇಕು’ ಎಂದುಹೇಳಿದರು.

ADVERTISEMENT

‘ಕಣ್ಣುಗಳನ್ನು ಮುಟ್ಟುವ ಮುನ್ನ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಬೇಕು. ಸೂರ್ಯನ ಕಿರಣಗಳನ್ನು ನೇರವಾಗಿ ವೀಕ್ಷಿಸಬಾರದು. ಪ್ರತಿ 10 ನಿಮಿಷಕ್ಕೊಮ್ಮೆ ಕಂಪ್ಯೂಟರ್‌ನಿಂದ ಹೊರಗೆ ದೃಷ್ಟಿ ಹರಿಸಬೇಕು. ವೈದ್ಯರ ಸಲಹೆ ಪಡೆಯದೆ ಯಾವುದೇ ಔಷಧಿಗಳನ್ನು ಕಣ್ಣಿಗೆ ಉಪಯೋಗಿಸಬೇಡಿ. ನಿಯಮಿತವಾಗಿ ಕಣ್ಣಿನ ಪರೀಕ್ಷೆ ಮಾಡಿಸಿಕೊಳ್ಳಿ. ಸೀಮಿತವಾಗಿ ವ್ಯಾಯಾಮ ಮಾಡುವುದರಿಂದ ಕಣ್ಣುಗಳು ಆರೋಗ್ಯವಾಗಿರುತ್ತವೆ. ಯುವಜನತೆ ಹೆಚ್ಚಾಗಿ ಟಿ.ವಿ, ಮೊಬೈಲ್ ಬಳಸುವುದನ್ನು ಕಡಿಮೆ ಮಾಡಬೇಕು’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕಿ ಡಾ.ಎಂ. ಇಂದುಮತಿ, ಆರ್‌ಸಿಎಚ್ ಅಧಿಕಾರಿ ಡಾ.ವಿಜಯಕುಮಾರಿ, ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಂ. ಕಮಲಾ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದನ್, ಆರೋಗ್ಯ ಶಿಕ್ಷಣಾಧಿಕಾರಿ ಪ್ರೇಮಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.