ಸಾಂದರ್ಭಿಕ ಚಿತ್ರ
ಮುಳಬಾಗಿಲು: ತಾಲ್ಲೂಕಿನ ಕಿರುಮಣಿ ಗ್ರಾಮದ ಬಳಿ ಪತಿಯನ್ನು ಪತ್ನಿ ಕತ್ತುಹಿಸುಕಿ ಕೊಂದು ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ರಾಜು ಸೊರೇನ್ (24) ಮೃತ ವ್ಯಕ್ತಿ ಮೂಲತಃ ಛತ್ತೀಸಗಢ ಮೂಲದ ರಾಜು ಸೊರೇನ್ ಹಾಗೂ ಪತ್ನಿ ಚಾಮಲಿ ಸೊರೇನ್ ತಾಲ್ಲೂಕಿನ ಕಿರುಮಣಿ ಗ್ರಾಮದ ಹೊರ ವಲಯದಲ್ಲಿರುವ ಕಾಡೇನಹಳ್ಳಿ ಗ್ರಾಮದಲ್ಲಿರುವ ಕೋಳಿ ಫಾರಂನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಆದರೆ, ಈ ದಂಪತಿಗೆ ಮಕ್ಕಳಾಗಿರಲಿಲ್ಲ. ಸಾಂಸಾರಿಕ ಜಗಳದ ಕಾರಣದಿಂದಾಗಿ ಈ ಕೊಲೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಶನಿವಾರ ಇಬ್ಬರ ಮಧ್ಯೆ ಗಲಾಟೆ ನಡೆದಿತ್ತು. ನಂತರ ರಾತ್ರಿ ಎಂದಿನಂತೆ ಮಲಗಿದ್ದರು. ಆದರೆ, ರಾತ್ರಿ ಎದ್ದ ಚಾಮಲಿ, ಪತಿ ರಾಜು ಸೊರೇನ್ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಶಂಕರ್, ಡಿವೈಎಸ್‌ಪಿ ಡಿ.ಸಿ.ನಂದಕುಮಾರ್, ಸರ್ಕಲ್ ಇನ್‌ಸ್ಪೆಕ್ಟರ್ ಸತೀಶ್, ನಂಗಲಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಎಲ್.ಮಮತಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.