ADVERTISEMENT

ಕೆಜಿಎಫ್‌: ಮಾರಕಾಸ್ತ್ರದಿಂದ ಹಲ್ಲೆ, ಮೂವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2021, 5:11 IST
Last Updated 12 ಡಿಸೆಂಬರ್ 2021, 5:11 IST

ಕೆಜಿಎಫ್‌: ರಾಬರ್ಟಸನ್‌ಪೇಟೆಯ ಪ್ರಮುಖ ರಸ್ತೆಯಲ್ಲಿ ದುಷ್ಕರ್ಮಿಗಳು ಮೂವರ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿರುವಘಟನೆ ನಡೆದಿದೆ.

ನಗರದ ಗೀತಾ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ನಡೆದುಕೊಂಡು ಹೋಗುತ್ತಿದ್ದ ಮಹಮದ್ ಜುಬೇರ್‌, ಶಕ್ತಿ ವಿಘ್ನೇಶ್‌ ಮತ್ತು ಮಹಮದ್ ಲುಕಮಾನ್ ಅವರ ಮೇಲೆ ಅಪರಿಚಿತರು ಹಲ್ಲೆ ನಡೆಸಿದ್ದಾರೆ.‌

ತೀವ್ರ ಸ್ವರೂಪದ ಗಾಯಗಳಾಗಿರುವ ಶಕ್ತಿ ವಿಘ್ನೇಶ್‌ ಅವರನ್ನು ಕೋಲಾರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರಿಗೆ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

ADVERTISEMENT

ರಾಬರ್ಟಸನ್‌ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.