ADVERTISEMENT

ಮಕ್ಕಳ ಆರೋಗ್ಯದ ಕಡೆ ಗಮನಹರಿಸಿ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2019, 10:25 IST
Last Updated 22 ಡಿಸೆಂಬರ್ 2019, 10:25 IST
ಕೋಲಾರ ತಾಲ್ಲೂಕಿನ ಹರಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ನಡೆದ ಕ್ವಿಟ್ ಇಂಡಿಯಾ ಸ್ಕೂಲ್ ಸಪ್ತಾಹ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಜಿ.ಕೃಷ್ಣಮೂರ್ತಿ
ಕೋಲಾರ ತಾಲ್ಲೂಕಿನ ಹರಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ನಡೆದ ಕ್ವಿಟ್ ಇಂಡಿಯಾ ಸ್ಕೂಲ್ ಸಪ್ತಾಹ ಕಾರ್ಯಕ್ರಮದಲ್ಲಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಜಿ.ಕೃಷ್ಣಮೂರ್ತಿ   

ಕೋಲಾರ: ‘ವಿದ್ಯಾರ್ಥಿಗಳು ಕಲಿಕೆಯ ಜತೆಗೆ ದೈಹಿಕವಾಗಿ, ಮಾನಸಿಕವಾಗಿ ಸದೃಡಗೊಂಡು ಉತ್ತಮ ಸಮಾಜ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕು’ ಎಂದು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಜಿ.ಕೃಷ್ಣಮೂರ್ತಿ ಸಲಹೆ ನೀಡಿದರು.

ತಾಲ್ಲೂಕಿನ ಹರಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚಿಗೆ ನಡೆದ ಕ್ವಿಟ್ ಇಂಡಿಯಾ ಸ್ಕೂಲ್ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಮಕ್ಕಳು ಉತ್ತಮ ಫಲಿತಾಂಶ ತೆಗೆದರೆ ಸಾಕು ಎಂಬ ಭಾವನೆಯಲ್ಲಿರುವ ಪೋಷಕರು ಅವರ ಆರೋಗ್ಯದ ಕಡೆ ಗಮನಹರಿಸುತ್ತಿಲ್ಲ’ ಎಂದು ವಿಷಾದ ವ್ಯಕ್ತಪಡಿಸಿದರು.

‘ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ವಿವಿಧ ರೀತಿಯ ಪ್ರತಿಭೆ ಅಡಗಿರುತ್ತದೆ. ಅದನ್ನು ಅನಾವಣಗೊಳಿಸಲು ಸೂಕ್ತ ವೇದಿಕೆ ಕಲ್ಪಿಸಬೇಕು. ಅವರಿಗೆ ಅಸಕ್ತಿಯಿರುವ ಕ್ಷೇತ್ರದಲ್ಲಿ ಮುಂದುವರೆಯಲು ಶಿಕ್ಷಕರು, ಪೋಷಕರು ಸಹಕಾರ ನೀಡಬೇಕು’ ಎಂದು ಕವಿ ಮಾತು ಹೇಳಿದರು.

ADVERTISEMENT

ಹರಟಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಆರ್.ವೆಂಕಟೇಶ್ ಮಾತನಾಡಿ, ‘ಮನಸ್ಸು ಮತ್ತು ದೇಹ ಸದೃಢವಾಗಿದ್ದರೆ ಸದೃಢ ಸಮಾಜ ನಿರ್ಮಿಸಬಹುದು ಎಂದರು.

‘ಯೋಗವು ವ್ಯಾಯಾಮ ಮಾತ್ರವಲ್ಲದೆ ಪ್ರಕೃತಿಯ ಜತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ. ನಮ್ಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುತ್ತದೆ. ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ’ ಎಂದು ತಿಳಿಸಿದರು.

ಸಪ್ತಾಹದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾಣ, ಪ್ರಮಾಣ ಪತ್ರ ವಿತರಿಸಲಾಯಿತು.
ಮುಖ್ಯೋಪಾಧ್ಯಾಯ ಜಿ.ಶ್ರೀನಿವಾಸ್, ದೈಹಿಕ ಶಿಕ್ಷಕ ಎಂ.ಕೃಷ್ಣಪ್ಪ, ಸಹ ಶಿಕ್ಷಕರಾದ ಸೂಣ್ಣೇಗೌಡ, ಗೋವಿಂದಪ್ಪ, ಮುನಿಯಪ್ಪ, ಮಮತಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.